ಹೆಣ್ಣುಮಕ್ಕಳಿಗೆ ಏಕೆ ಮೂಗು ಚುಚ್ಚುತ್ತಾರೆ ಗೊತ್ತಾ? ಇದರ ಹಿಂದಿದೆ ಒಂದು ಮಹತ್ತರ ಕಾರಣ ….

ಭಾರತೀಯರಿಗೆ ಮೂಗು ಚುಚ್ಚುವುದು ವಿವಾಹ ಸಂಪ್ರದಾಯದ ಒಂದು ಪ್ರಮುಖ ಆಚರಣೆ ಅಥವಾ ಭಾಗ. ಪ್ರಾಚೀನ ಕಾಲದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ತಮ್ಮ ಕಿವಿಗಳನ್ನು ಚುಚ್ಚಿಕೊಳ್ಳುತ್ತಿದ್ದರು. ಮಾತ್ರವಲ್ಲ ಮಹಿಳೆಯರು ಮೂಗು ಚುಚ್ಚಿಕೊಳ್ಳುತ್ತಿದ್ದರು. ಮೂಗು ಚುಚ್ಚಿ ಮೂಗುತಿ ಹಾಕುವುದು ಮಹಿಳೆಯರ ಅಂದ ಹೆಚ್ಚಿಸುವುದಕ್ಕಲ್ಲ. ಇದರ ಹಿಂದೆ ಮಹತ್ತರ ಕಾರಣವಿದೆ. ಹೌದು, ಈ ರೀತಿ ಮೂಗು ಚುಚ್ಚುವುದರ ಹಿಂದೆ ಕಾರಣವಿದೆ. ಹಾಗಾದರೆ ಏನದು? ಯಾಕೆ ಎಡಭಾಗದಲ್ಲಿ ಮೂಗುತಿ ಹಾಕಬೇಕು ಎಂಬುದರ ವಿಶೇಷ ಮಾಹಿತಿ ಇಲ್ಲಿದೆ ನೋಡಿ….

ಅಲಂಕಾರಿಕ ದೃಷ್ಟಿಕೋನದಿಂದ ನೋಡುವುದಾದರೆ ಇದು ಹೆಣ್ಣಿನ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ. ಆದರೆ ಇದು ಅಂದ ಹೆಚ್ಚಿಸುವುದಕ್ಕೆ ಮಾತ್ರವಲ್ಲ ಬದಲಾಗಿ ಈ ಆಭರಣಗಳು ಮಹಿಳೆಯರ ಆರೋಗ್ಯ ಕಾಪಾಡುತ್ತವೆ. ಕೆಲವು ಕಡೆಗಳಲ್ಲಿ ಮದುವೆಯಾದ ಹೆಂಗಸರು ಇದನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಇದೊಂದು ವಿವಾಹಿತರ ಸಂಕೇತ ಅದಲ್ಲದೆ ಮೂಗುತಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ನಂಬಿಕೆಗಳ ಪ್ರಕಾರ, ಮೂಗು ಚುಚ್ಚುವುದು ಪಾರ್ವತಿ ದೇವಿಯನ್ನು ಗೌರವಿಸುವ ಒಂದು ಮಾರ್ಗವಾಗಿದೆ. ಇದನ್ನು ಹದಿನಾರು ಅಲಂಕಾರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಮೂಗು ಅಥವಾ ಕಿವಿಗಳನ್ನು ಚುಚ್ಚಿಕೊಳ್ಳುವುದನ್ನು ಅಲಂಕಾರದ ಒಂದು ರೂಪವೆಂದು ನಾವು ಪರಿಗಣಿಸಬಹುದು, ಆದರೆ ಅದರ ಹಿಂದೆ ವೈಜ್ಞಾನಿಕ ಕಾರಣವಿದೆ. ವಾಸ್ತವವಾಗಿ, ಮೂಗು ಚುಚ್ಚುವುದರಿಂದ ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಪರಿಹಾರ ಸಿಗುತ್ತದೆ ಎಂದು ವೇದಗಳು ಮತ್ತು ಧರ್ಮಗ್ರಂಥಗಳಲ್ಲಿ ಬರೆಯಲಾಗಿದೆ. ಹೆಚ್ಚುವರಿಯಾಗಿ, ಹೆರಿಗೆಯ ಸಮಯದಲ್ಲಿ ಮಗುವಿಗೆ ಜನ್ಮ ನೀಡುವುದು ಸಹ ತುಂಬಾ ಸುಲಭವಾಗುತ್ತದೆ ಇದು ಆ ನೋವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ನಡೆದ ಕೆಲವು ಸಂಶೋಧನಗೆಳು ಕೂಡ ಇದಕ್ಕೆ ಪೂರಕವಾಗಿದೆ. ಮಾತ್ರವಲ್ಲ ಇದು ಮೈಗ್ರೇನ್ ನೋವಿನಿಂದ ಕೂಡ ಪರಿಹಾರ ನೀಡುತ್ತದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು