“ಟೀ-ಶರ್ಟ್ ಮೇಲೆ ನನ್ನ ಫೋಟೋ ಯಾಕೆ? ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿಯ ಕಿಡಿ!”

ಸಿವಾನ್:‌ ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ, ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಹಾರದ ಮತದಾರರ ಪಟ್ಟಿಯಲ್ಲಿ 124 ವರ್ಷದ ಮಹಿಳೆ ಎಂದು ನಮೂದಾಗಿರುವ ಮಿಂಟಾ ದೇವಿ ಎಂಬ ಮಹಿಳೆಯ ಫೋಟೋ ಇರುವ ಟೀ-ಶರ್ಟ್‌ ಧರಿಸಿದ್ದರು.

ಇದೀಗ ಮಿಂಟಾ ದೇವಿ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ನನ್ನ ಫೋಟೋ ಇರುವ ಟೀ-ಶರ್ಟ್‌ನ್ನು ಧರಿಸಲು ನಿಮಗೆ ಅಧಿಕಾರ ನೀಡಿದವರು ಯಾರು?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸಿವಾನ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮಿಂಟಾ ದೇವಿ, “ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನನ್ನ ಫೋಟೋ ಇರುವ ಟೀ-ಶರ್ಟ್‌ ಧರಿಸಿ ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ” ಎಂದು ಗುಡುಗಿದ್ದಾರೆ.

“ಮತದಾರರ ಪಟ್ಟಿಯಲ್ಲಿ ನನ್ನ ವಯಸ್ಸು 124 ವರ್ಷ ಎಂದು ನಮೂದಾಗಿರುವ ಬಗ್ಗೆ ನನಗೆ 2-4 ದಿನಗಳ ಹಿಂದೆ ತಿಳಿಯಿತು. ಮತದಾರರ ಪಟ್ಟಿಯಲ್ಲಿ ಏನೋ ವ್ಯತ್ಯಾಸ ಆಗಿದೆ ಎಂದು ನಾನು ಭಾವಿಸುತ್ತೇನೆ. ಈ ಬಗ್ಗೆ ನನಗೆ ಆಡಳಿತದಿಂದ ಇದುವರೆಗೂ ಯಾವ ಕರೆಯೂ ಬಂದಿಲ್ಲ. ಆದರೆ ಈ ವಿಷಯವನ್ನು ತಮ್ಮ ರಾಜಕೀಯಕ್ಕಾಗಿ ಪ್ರತಿಪಕ್ಷದವರು ಬಳಸಿಕೊಳ್ಳುತ್ತಿರುವುದನ್ನು ನಾನು ವಿರೋಧಿಸುತ್ತೇನೆ” ಎಂದು ಮಿಂಟಾ ದೇವಿ ಗುಡುಗಿದ್ದಾರೆ.

ಮುಂದುವರೆದು, “ಕಾಂಗ್ರೆಸ್‌ ನಾಯಕರು ನನ್ನ ವಯಸ್ಸಿನ ಬಗ್ಗೆ ಏಕಿಷ್ಟು ತಲೆ ಕೆಡಿಸಿಕೊಂಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ನನ್ನ ವಿವರಗಳನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ಆಗ್ರಹವಾಗಿದೆ. ಆದರೆ ಕಾಂಗ್ರೆಸ್‌ ನಾಯಕರು ನನ್ನ ಅನುಮತಿ ಇಲ್ಲದೇ ನನ್ನ ಫೊಟೋವನ್ನು ಟೀ-ಶರ್ಟ್‌ ಮೇಲೆ ಅಚ್ಚು ಹಾಕಿಸಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗೆ ಮಾಡಲು ಅವರಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಮಿಂಟಾ ದೇವಿ ಖಾರವಾಗಿ ಪ್ರಶ್ನಿಸಿದ್ದಾರೆ. ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಇದೀಗ ದೇಶಾದ್ಯಂತ ಗಮನ ಸೆಳೆಯುತ್ತಿದೆ.

“ನನ್ನ ಹೆಸರನ್ನು ರಾಜಕಾರಣಕ್ಕಾಗಿ ಬಳಸಿಕೊಳ್ಳುವುದು ನನಗೆ ಇಷ್ಟವಿಲ್ಲ. ನನಗೂ ವಿಪಕ್ಷ ನಾಯಕರಿಗೂ ಯಾವ ಸಂಬಂಧವೂ ಇಲ್ಲ. ಪ್ರಿಯಾಂಕಾ ಗಾಂಧಿ ಆಗಲಿ ಇತರ ಕಾಂಗ್ರೆಸ್‌ ನಾಯಕರಾಗಲಿ ನನಗೆ ಗೊತ್ತಿಲ್ಲ. ಹಾಗಿದ್ದ ಮೇಲೆ ಅವರು ನನ್ನ ಫೋಟೋ ಇರುವ ಟೀ-ಶರ್ಟ್‌ ಧರಿಸಿ ಪ್ರತಿಭಟನೆ ಮಾಡುವುದು ಸರಿಯಲ್ಲ” ಎಂದು ಮಿಂಟಾ ದೇವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ಧವೂ ಆಕ್ರೋಶ:
ಇನ್ನು ಮತದಾರರ ಪಟ್ಟಿಯಲ್ಲಿ ತಮ್ಮ ವಯಸ್ಸನ್ನು 124 ವರ್ಷ ಎಂದು ನಮೂದಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಿಂಟಾ ದೇವಿ, ” ಸರ್ಕಾರದ ದಾಖಲೆಗಳ ಪ್ರಕಾರ ನನ್ನ ವಯಸ್ಸು 124 ವರ್ಷ ಎಂದಾದರೆ ಸರ್ಕಾರವೇಕೆ ನನಗೆ ವೃದ್ಧಾಪ್ಯ ವೇತನ ನೀಡುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ನನ್ನ ಆಧಾರ್ ಕಾರ್ಡ್‌ನಲ್ಲಿ 15-07-1990 ಅನ್ನು ನನ್ನ ಜನ್ಮ ದಿನಾಂಕವಾಗಿ ಉಲ್ಲೇಖಿಸಲಾಗಿದೆ. ಅದರಂತೆ ನನಗೀಗ 35 ವರ್ಷ. ಆದರೆ ನನಗೆ 124 ವರ್ಷ ಆಗಿದೆ ಎಂದು ಹೇಳುವ ಮೂಲಕ ತಪ್ಪು ಮಾಹಿತಿ ನೀಡಲಾಗಿದೆ” ಎಂದು ಮಿಂಟಾ ದೇವಿ ತೀವ್ರ ಅಸಮಧಾನ ಹೊರಹಾಕಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!