₹86 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಹೊಸ ವರ್ಷಾಕ್ಕೆ ಅನ್ಯ ರಾಜ್ಯಗಳಿಂದ ಗಾಂಜಾ ಸಾಗಾಟ!!!

ಬೆಂಗಳೂರು :- ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಜನರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿರುವುದಾಗಿ ರಾಜ್ಯ ರೈಲ್ವೆ ಪೊಲೀಸ್ ಎಸ್ಪಿ ಡಾ. ಸೌಮ್ಯಲತಾ ಎಸ್.ಕೆ. ಮಾಹಿತಿ ನೀಡಿದ್ದಾರೆ.

ಆರೋಪಿಗಳು ಜಾರ್ಖಂಡ್ ಹಾಗೂ ಒಡಿಶಾ ಮೂಲದವರಾಗಿದ್ದಾರೆ. ರಸ್ತೆ ಮಾರ್ಗಗಳ ಮೂಲಕ ಮಾದಕ ಪದಾರ್ಥಗಳನ್ನು ತಂದರೆ ಸಿಕ್ಕಿಬೀಳುವ ಭಯದಿಂದ, ಪೊಲೀಸ್ ಶ್ವಾನಗಳಿಗೂ ವಾಸನೆ ತಿಳಿಯದಂತೆ ಪ್ಯಾಕ್ ಮಾಡಿ ನಗರಕ್ಕೆ ಗಾಂಜಾ ತರುತ್ತಿದ್ದರು. ಮಾದಕ ದಂಧೆಕೋರರ ವಿರುದ್ಧ ಡಿಸೆಂಬರ್ ಮೊದಲ ವಾರದಿಂದಲೇ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ರೈಲ್ವೆ ಪೊಲೀಸರು ಪ್ರಶಾಂತಿ ಎಕ್ಸ್ಪ್ರೆಸ್ ಹಾಗೂ ಹಟಿಯಾ ಎಕ್ಸ್ಪ್ರೆಸ್ ರೈಲುಗಳಲ್ಲಿ ತಲಾಶ್ ನಡೆಸಿದ್ದಾರೆ. ಈ ವೇಳೆ ಟ್ರ್ಯಾಲಿ ಬ್ಯಾಗ್ಗಳಲ್ಲಿ ಗಾಂಜಾ ತುಂಬಿಸಿ ತರುತ್ತಿರುವುದು ಪತ್ತೆಯಾಗಿದೆ. ಬಂಧಿತರ ವಿಚಾರಣೆ ಮುಂದುವರೆಸಲಾಗಿದ್ದು, ಅವರ ಸಂಪರ್ಕದಲ್ಲಿದ್ದವರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!