11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….

ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಐವರು ಮುಖಂಡರೊಂದಿಗೆ ಯಶಸ್ವಿಯಾಗಿ ಶಾಂತಿಸಭೆ ನಡೆಸಲಾಯಿತು. ಬಳಿಕ ಗ್ರಾಮದಲ್ಲಿ 11 ವರ್ಷಗಳ ನಂತರ ಸಂತಸ ಮನೆ ಮಾಡಿದೆ.
ಈ ಮಾರಮ್ಮ ದೇವಾಲಯಕ್ಕೆ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಭಾರಿ ವಿವಾದ ಉಂಟಾಗಿ, ಬಾಗಿಲು ಮುಚ್ಚಲಾಗಿತ್ತು

ಕಳೆದ 11ವರ್ಷದಿಂದ ಮಾರಮ್ಮನ ದೇವಾಲಯದಲ್ಲಿ ಯಾವುದೇ ಪೂಜೆ ಪುನಸ್ಕಾರಗಳು ನಡೆದಿರಲಿಲ್ಲ. ದೇವಾಲಯದ ಬಾಗಿಲು ತೆರೆಸಲು ಸಾಕಷ್ಟು ಬಾರಿ ಸಂಧಾನ ಸಭೆಗಳು ನಡೆದಿತ್ತು. ಆದರೂ ಗ್ರಾಮದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು.
ಎಲ್ಲ ಕೋಮಿನ 5 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಸುಧೀರ್ಘ ಚರ್ಚೆ ನಂತರ ಮಾರಮ್ಮ ದೇವಾಲಯ ಬಾಗಿಲು ಮತ್ತೆ ತೆರೆಯುವ ನಿರ್ಧಾರಕ್ಕೆ ಬರಲಾಯಿತು. ಶುಕ್ರವಾರ ಸಂಜೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ತಹಸೀಲ್ದಾರ್ ಸಮ್ಮುಖದಲ್ಲಿ ದೇವಾಲಯದ ಬೀಗ ತೆರೆದು ಒಳ ಪ್ರವೇಶಿಸಿ ಗ್ರಾಮದ ದೇವತೆಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲಾಗಿದೆ.

“11 ವರ್ಷಗಳ ಹಿಂದೆ ಮಾಚ್೯ ತಿಂಗಳಿನಲ್ಲಿ ಮಾರಮ್ಮನ ಹಬ್ಬ ಸಂಭ್ರಮದಿಂದ ನಡೆಯುತ್ತಿತ್ತು. ದೇವಾಲಯಕ್ಕೆ ದಲಿತರು ಬಂದು ಪೂಜೆ ಮಾಡಿಸಿದರು ಎಂಬ ಕಾರಣಕ್ಕೆ ಸವರ್ಣಿಯರು, ಹಬ್ಬದ ವೇಳೆ ದೇವಸ್ಥಾನದ ಬಾಗಿಲು ಮುಚ್ಚಿದ್ದರು. ಇದಾದ ಬಳಿ ಹಲವು ಬಾರಿ ಮನವಿ ಮಾಡಿದ್ದರೂ, ಪ್ರಯೋಜನವಾಗಿರಲಿಲ್ಲ. ಈಗ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ದೇವಾಲಯ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗಿದೆ” ಎಂದು ಅಲ್ಲಿನ ರೈತ ಮುಖಂಡ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!