2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!

9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.

ಪಂದ್ಯದ ದಿಕ್ಕು ಬದಲಿಸಿದ ಹಾರ್ದಿಕ್

ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಆದರೆ ಹಾರ್ದಿಕ್ ದಾಳಿಗಿಳಿದ 17ನೇ ಓವರ್​ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್‌ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದು, ಆ ಓವರ್​ನಲ್ಲಿ ಕೇವಲ 4 ರನ್ ನೀಡುವ ಮೂಲಕ ಆಫ್ರಿಕಾ ತಂಡದ ಸಂಕಷ್ಟ ಹೆಚ್ಚಿಸಿದರು. ನಂತರ ಮುಂದಿನ ಓವರ್​ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್​ರನ್ನು ಬೌಲ್ಡ್ ಮಾಡಿ ಟೀಂ ಇಂಡಿಯಾವನ್ನು ಗೆಲುವಿನ ಹತ್ತಿರಕ್ಕೆ ತಂದರು. ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್‌ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಕೊನೆಯ ಓವರ್‌ನಲ್ಲಿ 16 ರನ್‌ಗಳ ಅಗತ್ಯವಿತ್ತು. 20ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತ ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ಮುದ್ರೆಯೊತ್ತಿದರು. ಈ ಓವರ್​ನಲ್ಲಿ ಹಾರ್ದಿಕ್ ಕೇವಲ 8 ರನ್ ನೀಡಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು.

  • Related Posts

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

    ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

      2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!