ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ !
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ…
ಗ್ಯಾಸ್ ಸಿಲಿಂಡರ್ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್!
ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.…
ಬಜೆಟ್ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್ನ ಹಿರಿಯ ಶಾಸಕರ ತಂಡ?
ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ.…
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!
2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್ಆರ್ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ…
ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ!
ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರವಂತೂ ಅನೇಕ ದೇಶಗಳಲ್ಲಿ ಇಂಧನ, ಗ್ಯಾಸ್ ಮುಂತಾದ…
ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ!
ಒಡಿಶಾದ ಕಟಕ್ನ ಎಸ್ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್…
ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ!
ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ…
ಇದೆಂಥಾ ಕಾಲ ಬಂತಪ್ಪಾ… ಹೋಟೆಲ್ಗಳ ಬಿಲ್ನಲ್ಲಿ ಗ್ಯಾಸ್ ಶುಲ್ಕ!
ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯಿಂದಾಗಿ ಹೋಟೆಲ್ ಮಾಲೀಕರು ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿದ್ದಾರೆ.…
ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್ ಸಿಬ್ಬಂದಿ!
ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್ಗಳಲ್ಲಿ ಸೌದೆ ಒಲೆ…
ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!
ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲುಷಿತ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ರೋಗ ತಡೆಗಟ್ಟಲು ನೈರ್ಮಲ್ಯ…















