ದೆಹಲಿ ವಿಧಾನಸಭೆ ಚುನಾವಣೆ 2025ರಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯಲಿದೆ?

ನವದೆಹಲಿ :- ದೆಹಲಿ ವಿಧಾನಸಭೆ ಚುನಾವಣೆ 2025ರ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 699 ಅಭ್ಯರ್ಥಿಗಳು ಕಣದಲ್ಲಿದ್ದು, 8.30ಕ್ಕೆ ಮತ ಎಣಿಕೆ ಆರಂಭವಾಗಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದ ಆಡಳಿತ ಪಕ್ಷ ಎಎಪಿ. ದೆಹಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭಕ್ಕೂ ಮೊದಲು ಮುಖ್ಯಮಂತ್ರಿ ಅತಿಶಿ ಮರ್ಲೆನಾ ಮಾತನಾಡಿದ್ದು, “ಎಎಪಿ ರಾಜ್ಯದಲ್ಲಿಅಧಿಕಾರ ಉಳಿಸಿಕೊಳ್ಳಲಿದೆ. ಅರವಿಂದ ಕೇಜ್ರಿವಾಲ್ 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಬೆಳಗ್ಗೆ 19 ಎಣಿಕಾ ಕೇಂದ್ರದಲ್ಲಿ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ಬಳಿಕ 8.30ರಿಂದ ಇವಿಎಂ ಮತಗಳ ಎಣಿಕಾ ಕಾರ್ಯ ಆರಂಭವಾಗಲಿದೆ. 11 ಗಂಟೆಯ ವೇಳೆಗೆ ಯಾವ ಪಕ್ಷ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಲಿದೆ? ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.
“ಇದು ಸಾಮಾನ್ಯವಾದ ಚುನಾವಣೆಯಲ್ಲ. ಈ ಬಾರಿ ಒಳ್ಳೆಯದು ಮತ್ತು ಕೆಟ್ಟದರ ನಡುವೆ ಹೋರಾಟ ನಡೆದಿದೆ. ನನಗೆ ಭರವಸೆ ಇದೆ ದೆಹಲಿಯ ಜನರು ಒಳ್ಳೆಯದಕ್ಕೆ ಬೆಂಬಲ ನೀಡಲಿದ್ದಾರೆ” ಎಂದು ಅತಿಶಿ ಮರ್ಲೆನಾ ಭರವಸೆ ವ್ಯಕ್ತಪಡಿಸಿದ್ದಾರೆ.
ನನ್ನ ಸೊಸೆ ಹೆಗಲ ಮೇಲೆ ಗನ್ ಇಟ್ಟು ನನಗೆ ಶೂಟ್ ಮಾಡ್ತಿದ್ದಾರೆ… ಆ ನಾಲ್ಕು ಜನ ಸೇರಿಕೊಂಡು ನನ್ನ ಮನೆ ಮುರಿದ್ರು!
“ಎಎಪಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಜನರು ಬೆಂಬಲ ನೀಡಲಿದ್ದಾರೆ. ಅರವಿಂದ ಕೇಜ್ರಿವಾಲ್ 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಅತಿಶಿ ಮರ್ಲೆನಾ ಹೇಳಿದರು. 2020ರಲ್ಲಿ ಪಕ್ಷ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿದ್ದರು. ಆದರೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅವರನ್ನು ಸಿಬಿಐ ಬಂಧಿಸಿತ್ತು. ಜೈಲಿಗೆ ಹೋದರೂ ಸಹ ಅವರು ಮುಖ್ಯಮಂತ್ರಿಯಾಗಿಯೇ ಮುಂದುವರೆದಿದ್ದರು. ಸುಪ್ರೀಂಕೋರ್ಟ್ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಕೇಜ್ರಿವಾಲ್ ರಾಜೀನಾಮೆ ನೀಡಿದ್ದರು. ಅತಿಶಿ ಮರ್ಲೆನಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ 16, ಎಎಪಿ 14 ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ರಾಜ್ಯದಲ್ಲಿ ಅಧಿಕಾರವನ್ನು ಪಡೆಯಲಿದೆ ಎಂದು ಅಂದಾಜಿಸಿವೆ. ಆದ್ದರಿಂದ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ. ಕಾಂಗ್ರೆಸ್ ಚುನಾವಣೆಯ ಪ್ರಚಾರದಲ್ಲಿಯೇ ಮಂಕಾಗಿತ್ತು. ಆದ್ದರಿಂದ ಈ ಬಾರಿ 0-1 ಸೀಟು ಗೆಲ್ಲಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿದ್ದವು. 2013, 2015 ಮತ್ತು 2020ರ ಚುನಾವಣೆಯಲ್ಲಿ ಎಎಪಿ ರಾಜ್ಯದಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡಿತ್ತು. ಈ ಬಾರಿಯೂ ಎಎಪಿ ಸರ್ಕಾರ ರಚನೆ ಮಾಡಲಿದೆ ಎಂಬ ನಿರೀಕ್ಷೆಯಲ್ಲಿ ಪಕ್ಷದ ನಾಯಕರು ಇದ್ದಾರೆ. ಆದರೆ ಆಡಳಿತ ವಿರೋಧಿ ಅಲೆ ಇದ್ದು, ಎಎಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!