5 ಬಾಲಕಿಯನ್ನು ಅಪಹರಿಸಿ ಕೊ*: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇ*ಟಿಗೆ ಬಿಹಾರ ಮೂಲದ ಆರೋಪಿ ಬ*!

ಹುಬ್ಬಳ್ಳಿ :- ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿ ಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.
ತಾರಿಹಾಳ ಬಳಿ ಸ್ಥಳ ಪರಿ ಶೀಲನೆಗೆ ಕರೆದೊಯ್ದಾಗ ಈತ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕ ನಗರದ ಪಿಎಸ್ಐ ಅನ್ನಪೂರ್ಣ ಅವರು ಗಾಳಿ ಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲು ಹಾಗೂ ಬೆನ್ನಿಗೆ ಗುಂಡು ತಗುಲಿದೆ ಎಂದು ಘಟನೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿ ಪೊಲೀಸರ ಗುಂಡೇಟಿಗೆ ಬಲಿಯಾದ ಕಾಮುಕ.


ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಗಾಯಗೊಂಡಿದ್ದ ಅವನನ್ನು ತಕ್ಷಣ ಕೆಎಂಸಿಆರ್ಐ ಆಸ್ಪತ್ರೆಗೆ ತರಲಾಯಿತು. ಅಷ್ಟರಲ್ಲಿ ಮೃತಪಟ್ಟಿದ್ದ ಪೊಲೀಸ್ ಸಿಬ್ಬಂದಿ ಯಶವಂತ ಮೊರಬ ಮತ್ತು ವೀರೇಶ ಅವರೂ ಘಟನೆ ಯಲ್ಲಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ಅವರು ವಿವರಿಸಿದರು.
ವಿವರ: ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಮಗು ನಾಪತ್ತೆಯಾದ ಸ್ಥಳದ ಎದುರಿಗಿರುವ ಶೆಡ್ನಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದರು. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿ ದಾಗ ಕೃತ್ಯದ ಕುರಿತು ಆತ ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದರು.
ಬಿಹಾರ ಮೂಲದ ಅವನು ವಿವಿಧ ಊರುಗಳಲ್ಲಿ ಕೆಲಸ ಮಾಡಿದ್ದ. ಹುಬ್ಬಳ್ಳಿ ಯಲ್ಲೂ ಕೆಲಸ ಮಾಡುತ್ತಾ ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊ ಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಎನ್ ಕೌಂಟರ್ ನಡೆದಿದೆ ಎಂದರು. ಬಹಾರ ಪಾಟ್ನಾದ ನಿವಾಸಿ ಯಾದ ಆರೋಪಿ ರಿತೀಶ ಕುಮಾರ್ ಭಾನುವಾರ ಬೆಳಿಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿಗೆ ತಿಂಡಿ ತಿನಿಸುಗಳನ್ನು ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿಹಾಕಿಕೊಂಡು ಎದುರಿನ ಮನೆಯಲ್ಲಿರುವ ಶೆಡ್ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆ ಕೂಗಿ ಕೊಂಡಾಗ ಕೊಲೆ ಮಾಡಿ ಪರಾರಿಯಾಗಿ ದ್ದಾನೆ. ಬಾಲಕಿಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ಹಿಡಿದು ಅಶೋಕ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಶಶಿಕುಮಾರ್ ತಿಳಿಸಿದರು.


ಮಗುವಿನ ಮೇಲೆ ಅತ್ಯಾಚಾರವಾಗಿ ರುವ ಬಗ್ಗೆ ಮಾಹಿತಿಯಿಲ್ಲ. ವೈದ್ಯಕೀಯ ವರದಿ ಬಂದ ನಂತರ ತಿಳಿಯಲಿದೆ. ಪೋಕ್ಸ್ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ಬಾಲಕಿಯನ್ನು ಅಪಹರಿಸಿ ಕೊಲೆಗೈದ ಘಟನೆ ವಿರುದ್ಧ ಭಾನುವಾರ ಸಂಜೆ ವಿವಿಧ ಸಂಘಟನೆಗಳಿಂದ ಹುಬ್ಬಳ್ಳಿ ಕೆಎಂಸಿ ಎದುರು ಪ್ರತಿಭಟನೆ ನಡೆಯಿತು. ಆರೋಪಿ ಎನ್ಕೌಂಟರ್ನಿಂದ ಮೃತಪಟ್ಟ ವಿಷಯ ತಿಳಿದು ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟು ಕೆಎಂಸಿ ಆಸತ್ರೆ ಎದುರು ಸಂಭ್ರಮಿಸಿದರು. ಪೊಲೀಸ್ ಕಮಿಷನರ್ ಶಶಿಕುಮಾರ್
ಅವರಿಗೆ ಜೈಕಾರ ಹಾಕಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!