8ರ ಬಾಲೆ ಅ*ಚಾರ ವಿರೋಧಿಸಿದ್ದಕ್ಕೆ ಕೊ* ಮಾಡಿದ್ದ ಆರೋಪಿಗೆ ಗುಂಡೇಟು.

ವಾರಾಣಸಿ:- ವಾರಾಣಸಿಯ ಶಾಲೆಯೊಂದರ ಬಳಿಕ ಗೋಣಿಚೀಲದಲ್ಲಿ 8 ವರ್ಷದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಅತ್ಯಾಚಾರವನ್ನು ವಿರೋಧಿಸಿದ್ದಕ್ಕೆ ಆರೋಪಿ ಬಾಲಕಿಯನ್ನು ಕೊಂದು, ಗೋಣಿಚೀಲದಲ್ಲಿ ತುಂಬಿ ಎಸೆದು ಪರಾರಿಯಾಗಿದ್ದ. ಆರೋಪಿ ಇರ್ಷಾದ್ಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಾರಾಣಸಿಯ ಸುಜಾಬಾದ್ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಶವ ಬಹದ್ದೂರ್ ಪ್ರಾಥಮಿಕ ಶಾಲೆಯ ಗೋಡೆಯ ಬಳಿ ಪತ್ತೆಯಾಗಿದೆ. ದೇಹದಾದ್ಯಂತ ರಕ್ತದ ಕಲೆಗಳು, ಮೂಗೇಟಿನ ಗುರುತುಗಳಿವೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇರ್ಷಾದ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಸ್ವಲ್ಪ ಸಮಯದ ನಂತರ ಗೋಣಿಚೀಲದಲ್ಲಿ ಶವದೊಂದಿಗೆ ಹೊರಗೆ ಬರುತ್ತಿರುವುದು ಕಂಡುಬಂದಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗುವ ಯತ್ನವನ್ನು ವಿರೋಧಿಸಿದ ಇರ್ಷಾದ್ ಬಾಲಕಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದಾಗ, ಪಕ್ಕದ ಮನೆಯ ಇರ್ಷಾದ್ ಎಂಬಾತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದು ದೃಢಪಟ್ಟಿದೆ. ಆಕೆ ತಡೆದ ಕಾರಣ ಕಲ್ಲಿನಿಂದ ಆಕೆಯನ್ನು ಕೊಂದು ಹಾಕಿದ್ದಾನೆ. ಶವವನ್ನು ಗೋಣಿಚೀಲದಲ್ಲಿ ಹಾಕಿ ಶಾಲೆಯ ಮುಂದೆ ಎಸೆದಿದ್ದಾನೆ ಎಂದು ವಾರಾಣಸಿ ಕಾಶಿ ವಲಯದ ಡಿಸಿಪಿ ಗೌರವ್ ಬನ್ಸ್ವಾಲ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಬಾಲಕಿಯ ತಂದೆ ದಿವ್ಯಾಂಗರಾಗಿದ್ದು, ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಬಾಲಕಿ ಸಂಜೆ 6.30ರ ಸುಮಾರಿಗೆ ಸಮೀಪದ ಅಂಗಡಿಗೆ ಸೊಳ್ಳೆಬತ್ತಿಯನ್ನು ತರಲು ಹೋಗಿದ್ದಳು. ಆಕೆ ಮನೆಗೆ ಬಾರದೇ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಹತ್ತಿರದ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಕ್ಯಾನ್ ಮಾಡಿದ ನಂತರ, ಪೊಲೀಸರು ಶಂಕಿತ ಇರ್ಷಾದ್ನನ್ನು ಪತ್ತೆ ಮಾಡಿದ್ದಾರೆ. ಆತನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಇರ್ಷಾದ್ ಪೊಲೀಸ್ ತಂಡದತ್ತ ಗುಂಡು ಹಾರಿಸಿದ್ದಾನೆ. ಪ್ರತಿಯಾಗಿ ಪೊಲೀಸರೂ ಗುಂಡು ಹಾರಿಸಿದ್ದು, ಈ ವೇಳೆ ಇರ್ಷಾದ್ ಕಾಲಿಗೆ ಗುಂಡು ತಗುಲಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!