ಮೈಸೂರು:- ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದ ವಿವೇಕಾನಂದ ನಗರದಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಹ* ಮಾಡಲಾಗಿದೆ. ಆಲಗೂಡು ಗ್ರಾಮದ ನಿವಾಸಿ 25 ವರ್ಷದ ಸುಭಾಷ್ ಮೃ* ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊ* ಬಳಿಕ ಮೂವರು ಆರೋಪಿಗಳು ತಾವೇ ಪೊಲೀಸರ ಮುಂದೆ ಶರಣಾಗಿದ್ದಾರೆ. ಆದರೆ ಸುಭಾಷ್ ಹ*ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಟಿ. ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




