ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

ಮೈಸೂರು  :- ದಸರಾ 2026ರ ಆಹ್ವಾನ ಪತ್ರಿಕೆ ಪ್ರಕಟವಾಗಿದ್ದು, ಅಕ್ಟೋಬರ್ 11ರಿಂದ 21ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕಂಬಳ ಮತ್ತು ಡ್ರೋನ್ ಶೋ ಪ್ರಮುಖ ಆಕರ್ಷಣೆಯಾಗಲಿವೆ. ಅಕ್ಟೋಬರ್ 21ರಂದು ವಿಜಯ ದಶಮಿಯ ಜಂಬೂ ಸವಾರಿಯೊಂದಿಗೆ ನಾಡಹಬ್ಬ ಸಂಪನ್ನಗೊಳ್ಳಲಿದೆ.

2026ರ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳ ಅಧಿಕೃತ ವೇಳಾಪಟ್ಟಿ ಮತ್ತು ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 11ರಂದು ಬೆಳಗ್ಗೆ 11:50 ರಿಂದ 12:13ರ ಶುಭ ಧನುರ್ ಲಗ್ನದಲ್ಲಿ ದಸರಾ ಉದ್ಘಾಟನೆಗೊಳ್ಳಲಿದೆ. ಗವಿಸಿದ್ದೇಶ್ವರ ಶ್ರೀಗಳು ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ. ಶ್ರೀಗಳು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಬೆಳ್ಳಿ ರಥದ ಪಲ್ಲಕ್ಕಿಯಲ್ಲಿರುವ ಮಹಿಷಾಸುರ ಮರ್ದಿನಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

ಅಕ್ಟೋಬರ್ 21ರಂದು ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 1:36 ರಿಂದ 1:56ರ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದೇ ದಿನ ಸಂಜೆ 4:10 ರಿಂದ 4:30ರ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ಸಿಗಲಿದೆ. ಅಕ್ಟೋಬರ್ 13ರಂದು ಯುವ ದಸರಾ ಪ್ರಾರಂಭವಾಗಿ ಐದು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ದಸರಾದಲ್ಲಿ ಹೊಸ ಸೇರ್ಪಡೆಯಾಗಿ ಅಕ್ಟೋಬರ್ 18ರಂದು ಕಂಬಳ ಸ್ಪರ್ಧೆಗೆ ಚಾಲನೆ ಸಿಗಲಿದೆ. ಎರಡು ದಿನಗಳ ಕಾಲ ನಡೆಯುವ ಕಂಬಳಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.

Related Posts

MRPLನಲ್ಲಿ ಸ್ಫೋಟ: 9 ಕಾರ್ಮಿಕರಿಗೆ ಗಾಯ; ಓರ್ವ ವ್ಯಕ್ತಿ ಸಾ*

ಮಂಗಳೂರು: ಮಂಗಳೂರಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (MRPL)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ…

ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ !

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್ ಇನ್‌‌ಸ್ಪೆಕ್ಟರ್ (PSI) ಎಂದು ಸುಳ್ಳು ಹೇಳಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರುಗಳನ್ನು ಪಡೆದು ಭಾರಿ ವಂಚನೆ ಎಸಗುತ್ತಿದ್ದ ಖತರ್ನಾಕ್ ನಕಲಿ ಲೇಡಿ ಪಿಎಸ್‌ಐ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು…

You Missed

ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

MRPLನಲ್ಲಿ ಸ್ಫೋಟ: 9 ಕಾರ್ಮಿಕರಿಗೆ ಗಾಯ; ಓರ್ವ ವ್ಯಕ್ತಿ ಸಾ*

MRPLನಲ್ಲಿ ಸ್ಫೋಟ: 9 ಕಾರ್ಮಿಕರಿಗೆ ಗಾಯ; ಓರ್ವ ವ್ಯಕ್ತಿ ಸಾ*

ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ !

ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ PSI ಬಂಧನ !

ಕರ್ನಾಟಕ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ-ಸಿಎಂ ಡಿಕೆಶಿಗೆ ಬಿವೈ ವಿಜಯೇಂದ್ರ ಆಗ್ರಹ.

ಕರ್ನಾಟಕ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ-ಸಿಎಂ ಡಿಕೆಶಿಗೆ ಬಿವೈ ವಿಜಯೇಂದ್ರ ಆಗ್ರಹ.

ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ

ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ

ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ!

ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ!