ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

  • Related Posts

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

    You Missed

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!