ಇಂದು ಮುಂಜಾನೆ ರಿಲೀಸ್ ಆದ ಅಲ್ಲು ಅರ್ಜುನ್ ; ಮೊದಲ ರಿಯಾಕ್ಷನ್

ಹೈದರಾಬಾದ್ :- ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಎ11 ಆರೋಪಿ ಆಗಿರೋ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಈಗ ಅವರು ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ ಇಂದು ಮುಂಜಾನೆ ರಿಲೀಸ್ ಆದ ಅವರು, ಪೊಲೀಸ್ ಭಧ್ರತೆಯೊಂದಿಗೆ ನೇರವಾಗಿ ಮನೆ ಸೇರಿದರು. ಅವರು ನಿವಾಸಕ್ಕೆ ಬಂದ ಬಳಿಕ ಮಾಧ್ಯಮಗಳಿಗೆ ರಿಯಾಕ್ಷನ್ ನೀಡಿದ್ದಾರೆ. ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳುವುದನ್ನು ಮರೆತಿಲ್ಲ. ಜೊತೆಗೆ ಕಾನೂನಿಗೆ ತಲೆ ಬಾಗೋದಾಗಿ ಹೇಳಿದ್ದಾರೆ.

‘ಅಭಿಮಾನಿಗಳಿಗೆ ಧನ್ಯವಾದ. ನಾನು ಆರಾಮಗಿದ್ದೇನೆ. ಆ ಬಗ್ಗೆ ಚಿಂತಿಸೋದು ಬೇಡ. ನಾನು ಕಾನೂನನ್ನು ಗೌರವಿಸುತ್ತೇನೆ. ನಾನು ತನಿಖೆಗೆ ಸಹಕರಿಸುತ್ತೇನೆ’ ಎಂದು ಅಲ್ಲು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಮೃತಪಟ್ಟ ರೇವತಿ ಕುಟುಂಬದವರ ಬಗ್ಗೆ ಮಾತನಾಡಲು ಮರೆತಿಲ್ಲ. ‘ನಾನು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಸಿನಿಮಾ ನೋಡಲು ಹೋದಾಗ ಈ ಘಟನೆ ನಡೆಯಿತು. ಅದು ಅಚಾನಕ್ಕಾಗಿ ಆಗಿದ್ದು. ಅದೊಂದು ಅಪಘಾತ’ ಎಂದಿದ್ದಾರೆ ಅಲ್ಲು ಅರ್ಜುನ್.
‘ಆ ರೀತಿ ಮಾಡಬೇಕು ಎಂಬ ಯಾವುದೇ ಉದ್ದೇಶ ಇರಲಿಲ್ಲ. ಅವರ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅದು ನನ್ನ ವೈಯಕ್ತಿಕ ನಿಯಂತ್ರಣದಲ್ಲಿ ಇರಲಿಲ್ಲ. ನಾನು ಕಳೆದ 20 ವರ್ಷಗಳಿಂದ ಅಲ್ಲಿಗೆ ಸಿನಿಮಾ ನೋಡಲು ಹೋಗುತ್ತಿದ್ದೇನೆ. ನನ್ನದು ಮಾತ್ರವಲ್ಲದೆ, ನನ್ನ ಅಂಕಲ್ ಸಿನಿಮಾಗಳನ್ನೂ ಅಲ್ಲಿ ನೋಡಿದ್ದೇನೆ. 30ಕ್ಕೂ ಹೆಚ್ಚು ಬಾರಿ ಆ ಥಿಯೇಟರ್ಗೆ ಭೇಟಿ ಕೊಟ್ಟಿದ್ದೇನೆ. ಯಾವಾಗಲೂ ಈ ರೀತಿ ಆಗಿರಲಿಲ್ಲ. ಸಾವಿನ ನಷ್ಟ ತುಂಬಲು ಸಾಧ್ಯವಿಲ್ಲ. ಆದರೆ, ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಅಲ್ಲು ಅರ್ಜುನ್ ಭರವಸೆ ನೀಡಿದ್ದಾರೆ.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!