ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.
ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ.
ಟ್ರಾವೆಲ್ಸ್ ಮಾಲೀಕರು ಔಡಿ, ಬಿಎಂಡಬ್ಲೂ, ಬೆನ್ಜ್, ವೋಲ್ವೋ ಸೇರಿದಂತೆ ಸಾಕಷ್ಟು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಯೆಲ್ಲೋ ಬೋರ್ಡ್ ರೀತಿಯಲ್ಲಿ ಬಾಡಿಗೆಗೆ ನೀಡುತ್ತಿದ್ದಾರೆ. ನಿಯಮದ ಪ್ರಕಾರ ವೈಟ್ ಬೋರ್ಡ್ ಕಾರು ಇರುವುದು ಸ್ವಂತ ಬಳಕೆಗೆ. ಆದರೆ, ವೈಟ್ ಬೋರ್ಡ್ ಐಷಾರಾಮಿ ಕಾರುಗಳನ್ನು ದೊಡ್ಡ ಸಿನಿಮಾ ನಟರು ಸೇರಿದಂತೆ ಸೆಲೆಬ್ರಿಟಿಗಳಿಗೆ ಬಾಡಿಗೆ ನೀಡಲು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಇಂದು ಆ ಕಾರುಗಳನ್ನು ಸೀಜ್ ಮಾಡಲಾಗಿದೆ.
ಇನ್ನು ಈ ವೇಳೆ ತೆರಿಗೆ ಕಟ್ಟದ, ವೈಟ್ ಬೋರ್ಡ್ನಲ್ಲಿ ಬೇರೆ ಬೇರೆ ರಾಜ್ಯದ ವಾಹನಗಳು ಅನಧಿಕೃತವಾಗಿ ಬೆಂಗಳೂರಿನಲ್ಲಿ ಸಂಚಾರ ಮಾಡುತ್ತಿರುವ ಮತ್ತು ಟ್ರಾವೆಲ್ಸ್ ನಡೆಸುತ್ತಿರುವ ವೈಟ್ ಬೋರ್ಡ್ ಕಾರುಗಳನ್ನು ಸೀಜ್ ಮಾಡಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್