ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್!

ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ ಉತ್ತಮವಾಗಿದೆ. ಇದೀಗ ಚಳಿಗಾಲದಲ್ಲೂ ಸಹ ಮಳೆ ನಿಲ್ಲುತ್ತಿಲ್ಲ. ನಿನ್ನೆ (ಗುರುವಾರ) ಮಧ್ಯಾಹ್ನದ ವೇಳೆ ನಗರದ ಹಲವೆಡೆ ಜಿನಿ ಜಿನಿ ಮಳೆಯಾಗಿತ್ತು. ಅದೇ ಸರಿಯಾದ ಮಧ್ಯಾಹ್ನದ ಹೊತ್ತಿಗೆ ಇಂದು(ಡಿಸೆಂಬರ್ 27) ಸಹ ಜಿಟಿ ಜಿಟಿ ಮಳೆಯಾಗಿದೆ. ಬೆಂಗಳೂರಿನಲ್ಲಿ ವಾತಾವರಣ ಕೂಲ್ ಕೂಲ್ ಆಗಿದ್ದು, ಜನರು ನಡುಗುವಂತಾಗಿದೆ. ಇನ್ನೊಂದೆಡೆ ಬಿಟ್ಟು ಬಿಟ್ಟು ಬರುತ್ತಿರುವ ಮಳೆಗೆ ಜನರು ರೋಸಿಹೋಗಿದ್ದಾರೆ. ಇನ್ನು ಬಿಟ್ಟು ಬಿಟ್ಟು ಬರುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಬೀದಿ ವ್ಯಾಪಾರಿಗಳು ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ. ಅತ್ತ ಜೋರಾಗಿ ಬರುತ್ತಿಲ್ಲ. ಇನ್ನೊಂದೆಡೆ ಆಕಡೆ ಹೋಗುತ್ತಿಲ್ಲ. ಆಗಾಗ ಜಿನಿ ಜಿನಿ ಮಳೆಯಾಗುತ್ತಿದೆ.

ಬಂಗಾಲ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯ ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಹೊರತುಪಡಿಸಿ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದು ಮತ್ತು ನಾಳೆ ಹಾಸನ, ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ನಗರ ಜಿಲ್ಲೆ ಕರ್ನಾಟಕದ ಒಳಭಾಗದ ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಮಂಜು ಇರಲಿದೆ. ನಾಳೆ ಬೆಳಿಗ್ಗೆ ಸಂದರ್ಭದಲ್ಲಿ ಬೆಂಗಳೂರು ಸುತ್ತಮುತ್ತ ಮಂಜು ಕವಿದ ವಾತಾವರಣ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭ.


ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭವಾಗಿದ್ದು, ಸಂಜೆ ಆಗುತ್ತಿದ್ದಂತೆಯೇ ಶುರುವಾಗುವ ಚಳಿ ಮರುದಿನ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಅವಧಿಗೂ ಮುನ್ನವೇ ಬೆಂಗಳೂರಿನಲ್ಲಿ ಭಾರೀ ಚಳಿ ಆರಂಭವಾಗಿತ್ತು. ಬಳಿಕ ಕೊಂಚ ಕಡಿಮೆಯಾಗಿತ್ತಾದರೂ ಬಳಿಕ ಬಂದ ಸೈಕ್ಲೋನ್ನಿಂದ ಬಿಸಿಲೇ ಇಲ್ಲದಂತಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ.
ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!