ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅಂತ್ಯಕ್ರಿಯೆ.

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್​ ಓಂ ಬಿರ್ಲಾ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​​ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಡಾ. ಮನಮೋಹನ್ ಸಿಂಗ್​ ಅಂತಿಮ ನಮನದಲ್ಲಿ ಗಣ್ಯರು ಭಾಗಿ
ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅವರ ನಿಧನದ ಕುರಿತು ಅಧ್ಯಕ್ಷ ಜೋ ಬೈಡನ್ ಸಂತಾಪ ಸೂಚಿಸಿದ್ದು ಅವರ ಹೇಳಿಕೆಯನ್ನು ಶ್ವೇತಭವನ ಬಿಡುಗಡೆ ಮಾಡಿದೆ. “ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡ ದುಃಖದಲ್ಲಿ ಜಿಲ್(ಬೈಡನ್​ ಪತ್ನಿ) ಮತ್ತು ನಾನು ಭಾರತದ ಜನರೊಂದಿಗೆ ನಾವು ಸೇರಿದ್ದೇವೆ. ಜಿಲ್ ಮತ್ತು ನಾನು ಮಾಜಿ ಪ್ರಥಮ ಮಹಿಳೆ ಗುರುಶರಣ್ ಕೌರ್, ಅವರ ಮೂವರು ಮಕ್ಕಳು ಮತ್ತು ಭಾರತದ ಎಲ್ಲಾ ಜನರಿಗೆ ನಮ್ಮ ಆಳವಾದ ಸಂತಾಪವನ್ನು ಸೂಚಿಸುತ್ತೇವೆ” ಎಂದಿದ್ದಾರೆ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಅಲ್ಲಿಂದ ಎಐಸಿಸಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಬೆಳಗ್ಗೆ 9.30ರವರೆಗೆ ಅಲ್ಲಿಯೇ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ತದನಂತರ ಅಲ್ಲಿಂದ ಮಾಜಿ ಪ್ರಧಾನಿಯ ಅಂತಿಮ ಯಾತ್ರೆ ಆರಂಭವಾಯಿತು. ಯಾತ್ರೆಯಲ್ಲಿ ರಸ್ತೆಯುದ್ದಕ್ಕೂ ಅಭಿಮಾನಿಗಳು ಪಾಲ್ಗೊಂಡಿದ್ದು, ಲಕ್ಷಾಂತರ ಜನರು ಭಾಗಿಯಾದರು.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!