RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ ಇನಿಂಗ್ಸ್​ ಅನ್ನು ಆರ್​ಸಿಬಿಯೊಂದಿಗೆ ಆರಂಭಿಸುತ್ತಿರುವುದು ವಿಶೇಷ.

ಈ ಬಾರಿಯ IPL​ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ.

ಐಪಿಎಲ್‌ 2024 ಟೂರ್ನಿಯಲ್ಲಿ ಉತ್ತಮ ಪ್ರದರ್ಸನ ನೀಡಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕ್ವಾಲಿಫೈಯರ್‌ 2 ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ನಿರಾಶೆ ಅನುಭವಿಸಿ ಸ್ಪರ್ಧೆಯಿಂದ ಹೊರಬಿದ್ದಿತ್ತು. ಇದರ ಬೆನ್ನಲ್ಲೇ 39 ವರ್ಷದ ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ದಿನೇಶ್‌ ಕಾರ್ತಿಕ್‌ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಸನ್ಯಾಸತ್ವ ತೆಗೆದುಕೊಂಡರು. ಅಂದಹಾಗೆ ಕ್ರಿಕೆಟ್‌ ಕಾಮೆಂಟರಿಯಲ್ಲಿ ಅಪಾರ ಆಸಕ್ತಿ ಹೊಂದಿರುವ ಡಿ.ಕೆ ಅವರನ್ನು ಮುಂದಿನ ದಿನಗಳಲ್ಲಿ ಕಾಮೆಂಟೇಟರ್‌ ಆಗಿ ಕಾಣಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ತಮಿಳುನಾಡು ಮೂಲದ ಸ್ಟಾರ್‌ ಕ್ರಿಕೆಟರ್‌ ಇದೀಗ ಕೋಚಿಂಗ್‌ ವೃತ್ತಿಬದುಕು ಶುರು ಮಾಡಲು ಮುಂದಾಗಿದ್ದಾರೆ.

  • Related Posts

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

    ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

      2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!