ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್; ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಜನ.

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್ ಆಗುವಂತಹ ಪೀಕ್ ಟೈಮ್ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್ ಜಾಮ್ನಲ್ಲಿ ಗಂಟೆಗಟ್ಟಲೆ ಸಿಲುಕಿ ನಗರ ಪ್ರದೇಶಗಳಲ್ಲಿನ ಜನ ಪ್ರತಿನಿತ್ಯ ಒದ್ದಾಡುತ್ತಿರುತ್ತಾರೆ. ಸಾಮಾನ್ಯವಾಗಿ ಹೆಚ್ಚೆಂದರೆ ಒಂದರಿಂದ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗುತ್ತವೆ. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಜನ ಹೈರಾಣಾಗಿ ಹೋಗಿದ್ದರು. ಅಷ್ಟಕ್ಕೂ ಜಗತ್ತಿನ ಅತಿ ದೊಡ್ಡ ಟ್ರಾಫಿಕ್ ಜಾಮ್ ಆಗಿದ್ದೆಲ್ಲಿ? ಕಾರಣವೇನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್:
2010 ರ ಆಗಸ್ಟ್ 14 ರಂದು ಚೀನಾದ ರಾಜಧಾನಿ ಬೀಜಿಂಗ್ನಲ್ಲಿ ವಿಶ್ವದ ಅತಿ ಉದ್ದನೆಯ ಟ್ರಾಪಿಕ್ ಜಾಮ್ ಉಂಟಾಗಿತ್ತು. 12 ದಿನಗಳ ಕಾಲ ಈ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಜನ ಹೈರಾಣಾಗಿ ಹೋಗಿದ್ದರು. ಬೀಜಿಂಗ್ನ ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ ವೇ (ಚೀನಾ ರಾಷ್ಟ್ರೀಯ ಹೆದ್ದಾರಿ 110) ನಲ್ಲಿ ಈ ಉದ್ದನೆಯ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು 100 ಕಿ.ಮೀ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಂದಿನ ಈ ಟ್ರಾಫಿಕ್ ಜಾಮ್ ಪ್ರಪಂಚದ ಅತ್ಯಂತ ಉದ್ದನೆಯ ಟ್ರಾಫಿಕ್ ಜಾಮ್ ಎಂಬ ಹೆಸರು ಪಡೆದಿದೆ.

ಅಂದು ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ವೇ ನಿರ್ಮಾಣ ಹಂತದಲ್ಲಿತ್ತು. ಈ ರಸ್ತೆ ಕಾಮಗಾರಿಗೆ ಬೇಕಾದ ಕಲ್ಲಿದ್ದಲು ಮತ್ತು ಇತರೆ ಸಾಮಾಗ್ರಿಗಳನ್ನು ಮಂಗೋಲಿಯಾದಿಂದ ಟ್ರಕ್ಗಳಲ್ಲಿ ತರಿಸಲಾಗಿತ್ತು. ಈ ದೈತ್ಯ ಟ್ರಕ್ಗಳ ಕಾರಣದಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಗಂಟೆಗಳು ಅಲ್ಲ, ಈ ಟ್ರಾಫಿಕ್ ಜಾಮ್ ಅನ್ನು ತೆರವು ಗೊಳಿಸಲು ಬರೋಬ್ಬರಿ 12 ದಿನಗಳು ಬೇಕಾದವು. ಸಂಚಾರ ದಟ್ಟಣೆ ಸಂಭವಿಸಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿದ್ದವು. ಇನ್ನೂ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಜನ ಮನೆಗೆ ಹೋಗಲು ಸಾಧ್ಯವಾಗದೆ ಎಕ್ಸ್ಪ್ರೆಸ್ವೇ ಉದ್ದಕ್ಕೂ ತಾತ್ಕಲಿಕ ಟೆಂಟ್ಗಳನ್ನು ನಿರ್ಮಿಸಿದ್ದರು. ಇನ್ನೂ ಕೆಲವರು ತಮ್ಮ ವಾಹನಗಳಲ್ಲಿ ಕುಳಿತು ದಿನ ಕಳೆದರು. ತಿಂಡಿ, ತಂಪು ಪಾನೀಯ, ಊಟ ಸೇರಿದಂತೆ ಆಹಾರ ಪದಾರ್ಥಗಳನ್ನು ಇಲ್ಲಿ ನಾಲ್ಕು ಪಟ್ಟು ಬೆಲೆಗೆ ಮಾರಾಟ ಮಾಡಲಾಗಿತ್ತು. ಇಲ್ಲಿನ ಸರ್ಕಾರ ಈ ಒಂದು ಟ್ರಾಫಿಕ್ ತೆರವುಗೊಳಿಸಲು ಹಗಲಿರುಳು ಶ್ರಮಿಸಿತ್ತು. 2010 ರ ಆಗಸ್ಟ್ 14 ರಂದು ಉಂಟಾದ ಈ ಟ್ರಾಫಿಕ್ ಜಾಮ್ ಆಗಸ್ಟ್ 26, 2010 ರಂದು ಕೊನೆಗೊಂಡಿತು. ಒಟ್ಟಾರೆ ಈ ಟ್ರಾಫಿಕ್ ತೆರವುಗೊಳಿಸಲು 12 ದಿನಗಳು ಬೇಕಾಯಿತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು