ವಿದ್ಯಾರ್ಥಿನಿಯ ಕೂದಲಿಗೆ ಬಿತ್ತು ಕತ್ತರಿ; ರೈಲು ನಿಲ್ದಾಣದಲ್ಲಿ ಕೂದಲು ಕಳ್ಳತನ!!

ಸಾಮಾನ್ಯವಾಗಿ ರೈಲು ನಿಲ್ದಾಣಗಳಲ್ಲಿ ಬ್ಯಾಗ್ಗಳು, ಪರ್ಸ್, ಮೊಬೈಲ್ ಕಳ್ಳತನವಾಗುವುದನ್ನು ಕೇಳಿದ್ದೇವೆ, ನೋಡಿದ್ದೇವೆ ಆದರೆ ಕೂದಲು ಕಳ್ಳತನ ಮಾಡಿರುವುದನ್ನು ಕೇಳಿರಲು ಸಾಧ್ಯವಿಲ್ಲ. ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಕೂದಲು ಕತ್ತರಿಸಿ ಕದ್ದೊಯ್ದಿರುವ ಘಟನೆ ದಾದರ್ ರೈಲು ನಿಲ್ದಾಣದಲ್ಲಿ ನಡೆದಿದೆ.
ದಾದರ್ ನಿಲ್ದಾಣದಲ್ಲಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯ ಕೂದಲನ್ನು ಕತ್ತರಿಸಲಾಗಿದೆ. ಕತ್ತರಿಸಿ ಬ್ಯಾಗ್ನಲ್ಲಿ ಹಾಕಿಕೊಂಡು ವ್ಯಕ್ತಿ ಓಡಿ ಹೋಗಿದ್ದಾನೆ. ಆಕೆ ಕಳ್ಳನ ಹಿಂದೆ ಓಡಿ ಹೋಗಿ ಹಿಡಿಯಲು ಪ್ರಯತ್ನಿಸಿದರೂ ಕೂಡ ಸಾಧ್ಯವಾಗಲಿಲ್ಲ. ಜನರ ಮಧ್ಯೆ ನುಸುಳಿ ಪರಾರಿಯಾಗಿದ್ದಾನೆ.
ವಿದ್ಯಾರ್ಥಿನಿ ದೂರಿನ ಮೇರೆಗೆ ಮುಂಬೈ ಸೆಂಟ್ರಲ್ ಲೋಹ್ಮಾರ್ಗ್ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಮೂಲಕ ಆರೋಪಿಯ ಹುಡುಕಾಟ ಆರಂಭಿಸಿದ್ದಾರೆ.
ಆಕೆ ಕಲ್ಯಾಣ್ ನಿವಾಸಿಯಾಗಿದ್ದು, ಬೆಳಗ್ಗೆ 8 ಗಂಟೆಗೆ ಕಾಲೇಜಿಗೆ ಹೊರಟವಳು ದಾದರ್ ನಿಲ್ದಾಣದಲ್ಲಿ ಇಳಿದಿದ್ದಳು. ದಾದರ್ ಬ್ರಿಡ್ಜ್ ಟಿಕೆಟ್ ಬುಕಿಂಗ್ ಬಳಿ ಬಂದಾಗ ಇದ್ದಕ್ಕಿದ್ದಂತೆ ಬೆನ್ನಿಗೆ ಚೂಪಾದ ವಸ್ತು ತಾಕಿದಂತಾಯಿತು. ಕೆಳಗೆ ನೋಡಿದಾಗ ಕೂದಲು ಬಿದ್ದಿತ್ತು.
ಓರ್ವ ವ್ಯಕ್ತಿ ಕೂದಲನ್ನು ಬ್ಯಾಗ್ಗೆ ತುಂಬಿಸಿಕೊಂಡು ಓಡಿ ಹೋಗುತ್ತಿರುವುದು ಕಂಡುಬಂದಿತ್ತು. ಆಕೆಯ ಅರ್ಧದಷ್ಟು ಕೂದಲನ್ನು ಕತ್ತರಿಸಲಾಗಿತ್ತು. ಆಕೆ ಹೆದರದೆ ಧೈರ್ಯವಾಗಿ ಆತನ ಹಿಂದೆ ಓಡಿ ಹಿಡಿಯಲು ಪ್ರಯತ್ನಿಸಿದಳು ಆದರೆ ಸಾಧ್ಯವಾಗಲಿಲ್ಲ.
ಮುಂಬೈ ಸೆಂಟ್ರಲ್ ಲೋಹ್ಮಾರ್ಗ್ ಪೊಲೀಸ್ ಠಾಣೆಗೆ ಬಂದು ಸಂಪೂರ್ಣ ಘಟನೆಯನ್ನು ವಿವರಿಸಿ ದೂರು ನೀಡಿದ್ದಾಳೆ. ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಆಡಳಿತ ಭದ್ರತೆ ಬಗ್ಗೆ ನಿಗಾ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!