ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ಗುಳುಂ…ಸಿಇಓ ವಿರುದ್ದ FIR.

ಮೈಸೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಇಓ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಸಂಸ್ಥೆಯ ಅಧ್ಯಕ್ಷರಾದ ಪರಮೇಶ್ವರ ರವರು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.
Oplus_131072

ಕಳೆದ 10 ವರ್ಷಗಳಿಂದ ವೆಂಕಟೇಶ್ ಸಂಸ್ಥೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ನೇಗಿಲಯೋಗಿ ವಿವಿದೋದ್ದೇಶವಸೌಹಾರ್ಧ ಸಹಕಾರಿ ಸಂಸ್ಥೆಯು ಮರುಳೇಶ್ವರ ಸೇವಾ ಟ್ರಸ್ಟ್ ಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ಕಾರಣಾಂತರದಿಂದ 19-02-2024 ಬೀಗ ಹಾಕಲಾಗಿತ್ತು.ಈ ಹಿನ್ನಲೆ ನೇಗಿಲಯೋಗಿ ಸಂಸ್ಥೆ 27-06-2024 ರಂದು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.ಈ ಅವಧಿಯಲ್ಲಿ ಷೇರುದಾರರು ಹಾಗೂ ಸಾಲಗಾರರು ಪಾವತಿಸಬೇಕಾದ ಹಣವನ್ನ ಸಿಇಓ ವೆಂಕಟೇಶ್ ರವರಿಗೆ ತಲುಪಿಸಿದ್ದಾರೆ.ಹಣಕ್ಕೆ ರಸೀತಿ ಸಹ ನೀಡಿದ್ದಾರೆ.ಆದ್ರೆ ಹಣವನ್ನ ಸಂಸ್ಥೆಯ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಇನ್ನಿತರ ಖಾತೆಗಳಿಗೆ ಜಮಾ ಮಾಡಿದ್ದಾರೆ.ಈ ಬಗ್ಗೆ ವೆಂಕಟೇಶ್ ರವರನ್ನ ಪ್ರಶ್ನಿಸಿದಾಗ 3.06 ಲಕ್ಷ ಬಳಸಿಕೊಂಡಿರುವುದಾಗಿ ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದಾರೆ.ಆದ್ರೆ ಆಡಿಟ್ ಮಾಡಿಸಿದಾಗ 30.18 ಲಕ್ಷ ಹಣ ದುರುಪಯೋಗವಾಗಿರುವುದಯ ಬೆಳಕಿಗೆ ಬಂದಿದೆ.ಈ ಬಗ್ಗೆ ವೆಂಕಟೇಶ್ ಸೂಕ್ತ ಉತ್ತರ ನೀಡಿಲ್ಲ ಹಾಗೂ ಸಂಸ್ಥೆಯ ಪದಾಧಿಕಾರಿಗಳ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ.ಈ ಹಿನ್ನಲೆ ವೆಂಕಟೇಶ್ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!