ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.

ಬೆಂಗಳೂರು, ಜ.13- ಆಡಳಿತಾ ರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟಗಳು ಮುಂದುವರೆ ದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆದಿದ್ದು, ಈ ಸಭೆ ಸಾಕಷ್ಟು ಕುತೂ ಹಲಗಳನ್ನು ಮೂಡಿಸಿದೆ.
ಮುಖ್ಯಮಂತ್ರಿಗಳು ಸಭೆ ಕರೆದಿರುವ – ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಇರುವ ಬಣಗಳು ಸಕ್ರಿಯವಾಗಿವೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರ ಇರುವ ಬಣವು ಸಭೆ ವೇಳೆ ಸ್ಪಷ್ಟ ಸಂದೇಶವೊಂದನ್ನು ಪಕ್ಷದ ಹೈಕಮಾಂಡ್‌ಗೆ ಪರೋಕ್ಷವಾಗಿ ರವಾನಿಸುವ ಸಾಧ್ಯತೆಯಿದೆ.
ಈ ನಡುವೆ ಶನಿವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಮತ್ತು ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿದ್ದು, ಈ ಭೇಟಿ ಮಹತ್ವ ಪಡೆದು ಕೊಂಡಿದೆ. ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ನಾಯಕರ ಮಾತುಕತೆಗಳು ಸಿಎಲ್‌ಪಿ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಗಳಿವೆ ಎಂದು ಮೂಲಗಳು ತಿಳಿಸಿವೆ.

2023 ರಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವಲ್ಲಿ ಯಶಸ್ವಿಯಾದ ಸಿದ್ದ ರಾಮಯ್ಯ ಅವರು ತಮ್ಮ ಅಧಿಕಾರಾವಧಿಯ ಎರಡು ವರ್ಷ ಪೂರ್ಣಗೊಳಿಸಿದ ನಂತರ ಅಧಿಕಾರ ಹಸ್ತಾಂತರಿಸಬೇಕಿದ್ದು, ಇದಕ್ಕೆ ಅವರು ಬದ್ಧರಾಗಿದ್ದಾರೆ. ಆದರೆ, ತಾವು ಆಯ್ಕೆ ಮಾಡಿದ ನಾಯಕ ಯಕ ಮುಖ್ಯಮಂತ್ರಿ ಯಾಗಬೇಕೆಂದು ಬಯಸುತ್ತಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಈ ಉದ್ದೇಶದಿಂದಲೇ ಪರಮೇಶ್ವರ್ ಅವರ ಪರ ಅಭಿಪ್ರಾಯ ಮೂಡಿಸಲು ಎಸ್‌ಸಿ/ಎಸ್‌ಟಿ ಶಾಸಕರ ಸಭೆ ನಡೆಸು ವಂತೆ ಸೂಚಿಸಿದ್ದರು ಎನ್ನಲಾಗಿದ್ದು, ಆದರೆ, ಶಿವಕುಮಾ‌ರ್ ಅವರು ಹೈಕ ಮಾಂಡ್ ಮೂಲಕ ಸಭೆಗೆ ಬ್ರೇಕ್ ಹಾಕಿಸಿದ್ದರು ಎನ್ನಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಡಾ.ಪರಮೇಶ್ವರ್ ಅವರಿಗೆ ಸಭೆ ನಡೆಸದಂತೆ ಸೂಚಿಸಿದ್ದರು. ಆದರೆ, ಅವರ ಸೂಚನೆಯನ್ನು ಪಾಲಿಸಿದ ಡಾ. ಪರಮೇಶ್ವರ್ ಅವರು, ನಾವು ಸಭೆಯನ್ನು ರದ್ದುಗೊಳಿಸಿಲ್ಲ, ಮುಂದೂಡಿ ದ್ದೇವಷ್ಟೇ. ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಹೇಳಿದ್ದರು. ಸಭೆ ವಿಚಾರವಾಗಿ ಸಚಿವ ರಾಜಣ್ಣ ಅವರು ಹೈಕಮಾಂಡ್ ಹಾಗೂ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾ ಹೊರಹಾಕಿದ್ದರು. ಸಿದ್ದರಾಮಯ್ಯ ಅವರ ಬೆಂಬಲಿಗರಾದ ರಾಜಣ್ಣ ಅವರು ಹೈಕಮಾಂಡ್‌ಗೆ ಸಂದೇಶ ರವಾನಿಸುವ ಸಲುವಾಗಿ ಈ ಹೇಳಿಕೆಗಳನ್ನು ನೀಡಿರ ಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಸಭೆ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲಾ ಅವರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದು. ಈ ವೇಳೆ ಸಿದ್ದು ಬಣದಲ್ಲಿರುವ ಡಾ.ಪರಮೇಶ್ವರ್, ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಇತರೆ ನಾಯಕರು ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ಸಿದ್ದರಾಮಯ್ಯ ಅವರ ಸಲಹೆಯಂತೆ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ. ನಾನು ಸುರ್ಜೆವಾಲಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಮತ್ತು ಎಸ್‌ಸಿ/ಎಸ್‌ಟಿ ಶಾಸಕರ ಸಭೆಯ ಉದ್ದೇಶವನ್ನೂ ವಿವರಿಸಿದ್ದೇನೆ. ಸುರ್ಜೆವಾಲಾ ಅವರು ನಗರಕ್ಕೆ ಬಂದಾಗ, ನಾನು ಅವರೊಂದಿಗೆ ಚರ್ಚೆ ನಡೆಸಿ, ಸಭೆ ನಡೆಸಲಾಗುವುದು ಎಂದು ಪರಮೇಶ್ವರ್ ಅವರು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!