ಕನ್ನಡ ಬಿಗ್ ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ.

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್ ಜಗದೀಶ್ರನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಇತ್ತೀಚೆಗೆ ಅಣ್ಣಮ್ಮ ದೇವಿ ಕೂರಿಸುವ ವಿಚಾರಕ್ಕೆ ಕಿರಿಕ್ ಆಗಿತ್ತು. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಅಣ್ಣಮ್ಮ ದೇವಿಯನ್ನು ಕೋರಿಸಿದ್ದನ್ನು ಜಗದೀಶ್ ಪ್ರಶ್ನೆ ಮಾಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಘಟನೆ ಸಂಬಂಧ ಪ್ರತಿಕ್ರಿಯಿಸುವಾಗ ಅವರು ಆವಾಜ್ ಹಾಕಿದ್ದರು. ದರ್ಶನ್ ಅಭಿಮಾನಿಗಳನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದರು. ‘ಈ ಕೆಲಸ ಮಾಡಿದ್ದು ದರ್ಶನ್ ಅಭಿಮಾನಿಗಳಂತೆ. ನನ್ನ ಬಳಿ ಬರುವಾಗ ವಿಮೆ ಮಾಡಿಸಿಕೊಂಡು ಬನ್ನಿ’ ಎಂದಿದ್ದರು.

ಈ ಬೆನ್ನಲ್ಲೇ ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಅಟ್ಯಾಕ್ ಆಗಿದೆ. ಕೆಲವರು ಕೋಲು ದೊಣ್ಣೆ ತೆಗೆದುಕೊಂಡು ಬಂದು ಜಗದೀಶ್ ಅವರ ಕಾರನ್ನು ಪೀಸ್ ಪೀಸ್ ಮಾಡಿದ್ದಾರೆ. ಜಗದೀಶ್ ಅವರ ಮೇಲೆ ಹಲ್ಲೆ ಮಾಡಲಾಗಿತ್ತು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!