ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ!

ಹೌದು ಇಂತಹದೊಂದು ಘಟನೆ ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕಿ ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು ಎಂದು ಹೇಳಿದ್ದಾರೆ.ಬಂಗಾಳದ ಹರಿಂಗಟಾದಲ್ಲಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿಈ ಘಟನೆ ನಡೆದಿದೆ.ಸದ್ಯ ಇದೀಗ ಪಶ್ಚಿಮ ಬಂಗಾಳದ ಕಾಲೇಜಿನ ತರಗತಿಯಲ್ಲೇ ಮಹಿಳಾ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ.
ಪ್ರಾಧ್ಯಾಪಕಿ ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತಾಧಿಕಾರಿಗಳು ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು ಎಂದು ಹೇಳಿದ್ದಾರೆ. ಬಂಗಾಳದ ಹರಿಂಗಟಾದಲ್ಲಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿಈ ಘಟನೆ ನಡೆದಿದೆ. ಅಪ್ಲೈಡ್ ಸೈಕಾಲಜಿ ವಿಭಾಗದ ಅಧ್ಯಾಪಕರೊಬ್ಬರು ವಧುವಿನಂತೆ ಬಟ್ಟೆ ಧರಿಸಿ , ಹೂಮಾಲೆಯನ್ನು ಪರಸ್ಪರ ಹಾಕಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆತ ಆಕೆಯ ಹಣೆಗೆ ಸಿಂಧೂರ ಇಟ್ಟಿದ್ದಾನೆ. ಈ ದೃಶ್ಯ ಎಲ್ಲರ ಅನುಮಾನಕ್ಕೆ ಕಾರಣವಾಗಿದೆ.
ಅದಾಗಿಯೂ ಸಹ ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕರ ಜೊತೆಗೆ ಮೂವರು ಸಾಕ್ಷಿಗಳು ಸಹಿ ಮಾಡಿದ ಕೈಬರಹದ ಪ್ರಮಾಣಪತ್ರವೂ ಆನ್ಲೈನ್ನಲ್ಲಿ ಕಾಣಿಸಿಕೊಂಡಿದೆ. ಆದರೆ ಇದು ಕಾಲೇಜಿನ ಪ್ರಾಜೆಕ್ಟ್ನ ಒಂದು ಭಾಗ ಎಂದು ಪ್ರಾಧ್ಯಾಪಕರು ಹೇಳಿದ್ದಾರೆ. ವೀಡಿಯೊ ಪ್ರಸಾರವಾದ ನಂತರ, ವಿಶ್ವವಿದ್ಯಾಲಯದ ಅಧಿಕಾರಿಗಳು ವಿಚಾರಣೆಯನ್ನು ಪ್ರಾರಂಭಿಸಿದರು ಮತ್ತು ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿದ್ದಾರೆ. ಪ್ರಾಧ್ಯಾಪಕರಿಗೆ ರಜೆಯನ್ನು ನೀಡಿರುವುದು ಕುತೂಹಲಕಾರಿಯಾದ ವಿಷಯವಾಗಿದೆ. ಆದ್ದರಿಂದ ಆಡಳಿತ ವರ್ಗ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬುದು ಗಮನಾರ್ಹವಾಗಲಿದೆ.
ಈ ಮದುವೆ ಸಂಭ್ರಮವು ಫ್ರೆಷರ್ ಪಾರ್ಟಿ ವೇಳೆ ಈ ನಡೆದಿದೆ. ಇದು ಪ್ರಾಜೆಕ್ಟ್ನ ಒಂದು ಭಾಗವಾಗಿತ್ತು, ನಮ್ಮ ಕಾಲೇಜಿನ ಪ್ರತಿಷ್ಠೆಗೆ ಧಕ್ಕೆ ತರಲು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಅದಕ್ಕೆ ಕಾರಣರಾದವರ ವಿರುದ್ಧ ಪೊಲೀಸ್ ದೂರು ದಾಖಲಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ನಾವು ಫ್ರೆಷರ್ ಪಾರ್ಟಿಗಾಗಿ ಯೋಜಿಸಿದ್ದ ನಾಟಕ. ಇದನ್ನು ನನ್ನ ವಿರುದ್ಧದ ಪಿತೂರಿಯ ಭಾಗವಾಗಿ ಉದ್ದೇಶಪೂರ್ವಕವಾಗಿ ವೈರಲ್ ಮಾಡಲಾಗಿದೆ. ಎಂದು ಪ್ರಾಧ್ಯಾಪಕರು ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.
ನನ್ನ ಮಾನಹಾನಿ ಮಾಡಲು ಪ್ರಯತ್ನಿಸಿದವರ ವಿರುದ್ಧ ನಾನು ಪೊಲೀಸ್ ದೂರು ನೀಡುತ್ತೇನೆ ಎಂದು ಪ್ರಾಧ್ಯಾಪಕಿ ಕೂಡ ಹೇಳಿದ್ದಾರೆ. ಯಾವುದೇ ಅನುಚಿತತೆ, ಅನೈತಿಕ ನಡವಳಿಕೆ ಇಲ್ಲ ಮತ್ತು ಇದು ಸಂಪೂರ್ಣವಾಗಿ ಕಾಲೇಜಿಗೆ ಸಂಬಂಧ ಪಟ್ಟ ನಾಟಕದ ಭಾಗವಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ನ್ಯಾಯಾಲಯ ನೀಡುವ ತೀರ್ಪು ಅಂತಿಮವಾಗಲಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು