ಗಂಡನ ಕಿರುಕುಳ ತಾಳಲಾರದೆ ನೇ*ಗೆ ಶರಣಾದ ವಿವಾಹಿತೆ.!

ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಗಂಡ ಪ್ರಭಿನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಜೇರಿ ಪೊಲೀಸರು, ಮಹಿಳೆಯ ಗಂಡ ಪ್ರಭಿನ್‌ನನ್ನು ಬಂಧಿಸಿದ್ದಾರೆ. ಗುರುವಾರ ಪೂಕ್ಕೋಟ್ಟುಂಪಾಡಂ ಮೂಲದ ವಿಷ್ಣುಜಾ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 2023ರ ಮೇ ತಿಂಗಳಲ್ಲಿ ವಿಷ್ಣುಜಾ ಮತ್ತು ಎಳಂಕೂರು ಮೂಲದ ಪ್ರಭಿನ್‌ರ ವಿವಾಹ ನೆರವೇರಿತ್ತು. ಗಂಡನ ಕಿರುಕುಳದಿಂದಲೇ ಮಗಳ ಸಾವು ಆಗಿದೆ ಎಂದು ವಿಷ್ಣುಜಾ ಕುಟುಂಬ ಗಂಭೀರ ಆರೋಪವನ್ನು ಮಾಡಿದೆ. ಆದರೆ ಈ ಆರೋಪವನ್ನು ಪ್ರಭಿನ್ ಕುಟುಂಬ ನಿರಾಕರಿಸಿದೆ. ಪ್ರಭಿನ್ ಮತ್ತು ವಿಷ್ಣುಜಾ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದವು. ಇದಕ್ಕೆ ಕಾರಣ ತಿಳಿದಿಲ್ಲ ಎಂದು ಪ್ರಭಿನ್ ಕುಟುಂಬ ಹೇಳಿದೆ. ವರದಕ್ಷಿಣೆ ಕೇಳಿಲ್ಲ ಅಥವಾ ಪಡೆದಿಲ್ಲ ಎಂದು ಪ್ರಭಿನ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಗಂಡನ ಮನೆಯಲ್ಲಿ ಮಗಳಿಗೆ ತೀವ್ರ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಮದುವೆಯಾದ ಕೆಲವು ವಾರಗಳಲ್ಲೇ ಪ್ರಭಿನ್ ಕಿರುಕುಳ ನೀಡಲು ಪ್ರಾರಂಭಿಸಿದ. ಕೆಲಸವಿಲ್ಲದ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು. ತಂದೆ-ತಾಯಿಗೆ ತೊಂದರೆ ಕೊಡಬಾರದು ಎಂದು ಮಗಳು ಎಲ್ಲವನ್ನೂ ಮುಚ್ಚಿಟ್ಟಳು. ಮಗಳನ್ನು ಬೈಯ್ಯುವ ವಾಯ್ಸ್ ನೋಟ್‌ಗಳು ನನ್ನ ಬಳಿ ಇವೆ. ದೈಹಿಕವಾಗಿಯೂ ಮಗಳಿಗೆ ಕಿರುಕುಳ ನೀಡಲಾಗುತ್ತಿತ್ತು, ಮಗಳ ದೇಹದ ಮೇಲಿನ ಗಾಯಗಳ ಬಗ್ಗೆ ಆಕೆಯ ಗೆಳತಿ ಹೇಳಿದ್ದಳು ಎಂದು ವಿಷ್ಣುಜಾಳ ತಂದೆ ತಿಳಿಸಿದ್ದಾರೆ.
ಅನ್ನಭಾಗ್ಯ ಅಕ್ಕಿಯಲ್ಲಿ ದೊಡ್ಡ ಸ್ಕ್ಯಾಮ್ ಇದೆ MLA, ಸಚಿವರ ಪಟಾಲಂ ಈ ದಂಧೆಯಲ್ಲಿ ತೊಡಗಿದೆ.!
ಸೌಂದರ್ಯ ಕಡಿಮೆ, ಕೆಲಸವಿಲ್ಲ, ವರದಕ್ಷಿಣೆ ಕಡಿಮೆ ಎಂದು ಹೇಳಿ ವಿಷ್ಣುಜಾಳಿಗೆ ಗಂಡ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬ ಆರೋಪಿಸಿದೆ. ಇದಕ್ಕೆಲ್ಲ ಗಂಡನ ಸಂಬಂಧಿಕರು ಸಹಕರಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಗಂಡ ಮತ್ತು ಆತನ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ಕುಟುಂಬ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಮಂಜೇರಿ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು