ಕ್ಯಾಮೆರಾದಲ್ಲಿ ಸೆರೆಯಾದ ಶ್ವೇತ ವರ್ಣದ ಜಿಂಕೆ ; ಸ್ವರ್ಗದಿಂದ ಧರೆಗಿಳಿದು ಬಂದ ಜೀವಿದಂತಿದೆ ಅಲ್ವಾ!

ಭೂಮಿಯ ಮೇಲೆ ವೈವಿದ್ಯಮಯ ಜೀವಿಗಳು ವಾಸಿಸುತ್ತವೆ. ಅವುಗಳಲ್ಲಿ ಕೆಲವೊಂದು ಅತ್ಯಪರೂಪದ ಜೀವಿಗಳು ಅಪರೂಪಕ್ಕೆ ಕಾಣಿಸಿಕೊಳ್ಳುವ ಮೂಲಕ ನಮ್ಮನ್ನು ಬೆರಗುಗೊಳಿಸುತ್ತವೆ. ಹೀಗೆ ಚಿತ್ರವಿಚಿತ್ರವಾದ ಹಾಗೂ ಮುದ್ದುಮುದ್ದಾಗಿರುವ ಜೀವಿಗಳು ಕಾಣಿಸಿಕೊಳ್ಳುವ ಘಟನೆಗಳ ಸುದ್ದಿಗಳು ವಿರಳವಾಗಿ ಕೇಳಿ ಬರುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಜೀವಿಗಳು ತಮ್ಮ ನೋಟ ಹಾಗೂ ಸೌಂದರ್ಯದಿಂದಲೇ ನಮ್ಮನ್ನು ಬೆರಗುಗೊಳಿಸುತ್ತವೆ. ಅದೇ ರೀತಿ ಇಲ್ಲೊಂದು ಸಖತ್ ಕ್ಯೂಟ್ ಆಗಿರುವ ಶ್ವೇತ ವರ್ಣದ ಜಿಂಕೆಯೊಂದು ಕಾಣಿಸಿಕೊಂಡಿದೆ. ಹೌದು ಹಿಮ ಭರಿತ ಕಾಡಿನಲ್ಲಿ ಬಿಳಿ ಬಣ್ಣದ ಅತಿ ಅಪರೂಪದ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ತಮ್ಮ ಕ್ಯಾಮೆರಾದಲ್ಲಿ ಈ ಸುಂದರ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದ್ದು, ಜಿಂಕೆಯ ಸೌಂದರ್ಯಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಹಿಮಾವೃತ ಪ್ರದೇಶದಲ್ಲಿ ಅತ್ಯಪರೂಪದ ಬಿಳಿ ಬಣ್ಣದ ಆಲ್ಬಿನೋ ಜಿಂಕೆ ಕಾಣಿಸಿಕೊಂಡಿದೆ. ಕಾಡಿನ ಸಮೀಪದಲ್ಲುರುವ ರಸ್ತೆಯಲ್ಲಿ ಹೋಗುತ್ತಿರುವ ವೇಳೆ ಮಹಿಳೆಯೊಬ್ಬರ ಕಣ್ಣಿಗೆ ಸುಂದರವಾದ ಆಲ್ಬಿನೋ ಜಿಂಕೆ ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಆಕೆ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಈ ಹಿಂದೆ ಕಬಿನಿಯಲ್ಲಿಯೂ ಬಿಳಿ ಬಣ್ಣದ ಜಿಂಕೆಯೊಂದು ಕಾಣಿಸಿಕೊಂಡಿತ್ತು. ಅಲ್ಬಿನೋ ಜಿಂಕೆಗಳು ಅತ್ಯಂತ ಅಪರೂಪದ ಮೃಗಗಳಾಗಿವೆ. ಪ್ರತಿ ಒಂದು ಲಕ್ಷ ಜಿಂಕೆಗಳ ಜನನದಲ್ಲಿ ಒಂದು ಮಾತ್ರ ಈ ಬಿಳಿ ಬಣ್ಣದ ಜಿಂಕೆ ಜನಿಸುತ್ತವೆ. ರಕ್ತದಲ್ಲಿನ ಮೆಲನಿನ್ ಎಂಬ ಅಂಶದ ಕೊರತೆಯಿಂದಾಗಿ ಕೆಲವೊಂದು ಜಿಂಕೆಗಳು ಹೀಗೆ ಬಿಳಿ ಬಣ್ಣವನ್ನು ಹೊಂದಿರುತ್ತವೆ. ಹೀಗಿದ್ದರೂ ಇವುಗಳು ನೋಡಲು ಬಹಳ ಸುಂದರವಾಗಿರುತ್ತವೆ. ಇದೀಗ ಮತ್ತೊಮ್ಮೆ ಶ್ವೇತ ವರ್ಣದ ಜಿಂಕೆ ಕಾಣಿಸಿಕೊಂಡಿದೆ.

AccuWeather ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿರುವ ಈ ವಿಡಿಯೋದಲ್ಲಿ ಹಿಮದ ರಾಶಿಯ ಮಧ್ಯೆ ಗುಲಾಬಿ ಬಣ್ಣದ ಕಂಗಳ ಹಾಗೂ ಶ್ವೇತ ವರ್ಣದಿಂದ ಕೂಡಿದ ಆಲ್ಬಿನೋ ಜಿಂಕೆ ನಿಂತಿರುವ ಸುಂದರ ದೃಶ್ಯವನ್ನು ಕಾಣಬಹುದು. ಮಹಿಳೆಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅವರ ಕಣ್ಣಿಗೆ ಈ ಅದ್ಭುತ ಪ್ರಾಣಿ ಕಾಣಿಸಿಕೊಂಡಿದೆ.

2028 ಚುನಾವಣೆಗೂ ಹುಣಸೂರಿನ ಜನತೆ ಆಶೀರ್ವಾದ ಮಾಡ್ತರೆ… ಮುಂದಿನ ದಿನಗಳಲ್ಲಿ ಹರೀಶ್‌ ಗೌಡ್ರು ಸಚಿವರಾಗ್ತಾರೆ!

ಫೆಬ್ರವರಿ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.4 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಾನು ನೋಡಿದ ಅತ್ಯಂತ ಸುಂದರ ಪ್ರಾಣಿಗಳಲ್ಲಿ ಇದು ಒಂದುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼ ವಾವ್ಹ್.. ಇದಂತೂ ತುಂಬಾ ಸುಂದರವಾದ ಪ್ರಾಣಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಪರಿಪೂರ್ಣ ಸೌಂದರ್ಯಕ್ಕೆ ಉದಾಹರಣೆಯಂತಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!