ದಲೈ ಲಾಮರಿಂದ ಆಶೀರ್ವಾದ ಪಡೆದ GD ಹರೀಶ್ ಗೌಡ.. ನಿಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಹಾರೈಕೆ

ಟಿಬೇಟಿಯನ್ನರ ಅತ್ಯುಚ್ಛ ಧರ್ಮಗುರು, ನೊಬೆಲ್ ಶಾಂತಿಪ್ರಶಸ್ತಿ ಪುರಸ್ಕೃತ ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ಮಾಡಿ ಆಶೀರ್ವಾದ ಪಡೆದರು.ತಾಲೂಕಿನ ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ಬೀಡುಬಿಟ್ಟಿರುವ ಧರ್ಮಗುರು ದಲೈಲಾಮರನ್ನು ಭೇಟಿ ಮಾಡಿದ ವೇಳೆ ಶಾಸಕರನ್ನು ತುಂಬುಹೃದಯದಿಂದ ಆಶೀರ್ವದಿಸಿ, ನಿಮ್ಮ ಭವಿಷ್ಯ ಉಲ್ವಲವಾಗಿ ಬೆಳಗಲಿ ಎಂದು ಹಾರೈಸಿದರು. ನಂತರ ಧರ್ಮಗುರುಗಳೊಂದಿಗಿನ ಗಂಟೆಗೂ ಹೆಚ್ಚು ಕಾಲ ಹರೀಶ್‌ಗೌಡ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿzರು. ಈ ವೇಳೆ ಮಾತನಾಡಿದ ಅವರು, ಧರ್ಮಗುರುಗಳ ಭೇಟಿ ಮತ್ತು ನೀಡಿದ ಆಶೀರ್ವಾದ ನನ್ನ ಮನಸನ್ನು ಉಲ್ಲಸಿತಗೊಳಿಸಿದೆ. ಅವರಿಂದ ಸಕಾರಾತ್ಮಕ ಶಕ್ತಿಗಳನ್ನು ಪಡದಿದ್ದೇನೆ. ತಮ್ಮ ತಾಯಿನಾಡಿಗಾಗಿ ಶಾಂತಿಯುತವಾಗಿ ಹಲವು ದಶಕಗಳಿಂದ ಹೋರಾಡುತ್ತಿರುವ ಟಿಬೇಟಿಯನ್ನರಿಗೆ ಭಾರತ ಬೆನ್ನೆಲುಬಾಗಿ ನಿಂತಿದೆ. ಅವರ ಹೋರಾಟಕ್ಕೆ ಶೀಘ್ರ ಫಲಸಿಕ್ಕಲಿ ಎಂದು ಆಶಿಸುತ್ತೇನೆ ಎಂದರು.

ಈ ವೇಳೆ ಟಿಬೇಟಿಯನ್ ಪುನರ್ವಸತಿ ಕೇಂದ್ರದ ಅಧಿಕಾರಿಗಳು, ಮತ್ತು ಟಿಬೇಟಿಯನ್ ನಿವಾಸಿಗಳು ಹಾಜರಿದ್ದರು. ಹುಣಸೂರು ತಾಲೂಕು ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿರುವ ಟಿಬೇಟಿಯನ್ ಧರ್ಮಗುರು ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ಮಾಡಿ ಆರ್ಶೀವಾದ ಪಡೆದರು.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!

ಫ್ರಿಜ್ ಮೇಲೆ   5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ !

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ  !

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!