ಭಾರತೀಯ – ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ಸ್ವೀಕರಿಸಿದ ಕಾಶ್ ಪಟೇಲ್.

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಕಾಶ್ ಪಟೇಲ್ (Kash Patel) ಅವರಿಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI)ನ 9ನೇ ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷವೆಂದರೆ ಅಮೆರಿಕದಲ್ಲೂ ಹಿಂದೂ ಸಂಸ್ಕೃತಿ ಮರೆಯದ ಕಾಶ್ ಪಟೇಲ್ ಭಗವದ್ಗೀತೆ (Bhagavad Gita) ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದಾರೆ.
ಶ್ವೇತಭವನದ ಕ್ಯಾಂಪಸ್ನಲ್ಲಿರುವ ಐಸೆನ್ಹೋವರ್ ಕಾರ್ಯನಿರ್ವಾಹಕ ಕಚೇರಿ ಭವನದಲ್ಲಿ (EEOB) ಪ್ರಮಾಣ ವಚನ ಸ್ವೀಕರಿಸಿದರು. ಯುಎಸ್ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರು ಪ್ರಮಾಣ ವಚನ ಬೋಧಿಸಿದರು.ಪಟೇಲ್ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಗೆಳತಿ ಮತ್ತು ಕುಟುಂಬ ಸದಸ್ಯರು ಅವರ ಪಕ್ಕದಲ್ಲಿ ನಿಂತಿದ್ದರು ಮತ್ತು ಕುಟುಂಬ ಇತರ ಸದಸ್ಯರು ಮುಂದಿನ ಸಾಲಿನಲ್ಲಿ ಕುಳಿತಿದ್ದರು. ಇದೀಗ ಎಫ್ಬಿಐನ ನಿರ್ಗಮಿತ ನಿರ್ದೇಶಕ ಕ್ರಿಸ್ಟೋಫರ್ ವ್ರೇ ಅವರ ನಂತರ ಎಫ್ಬಿಐನ 9ನೇ ನಿರ್ದೇಶಕರಾಗಿ ಕಾಶ್ ಪಟೇಲ್ ಮುಂದುವರಿಯಲಿದ್ದಾರೆ.
ಟ್ರಂಪ್ ಶ್ಲಾಘನೆ:
ಇನ್ನೂ ಕಾಶ್ ಪಟೇಲ್ ಅವರ ನೇಮಕಾತಿಯನ್ನು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ನಾನು ಕಾಶ್ ಪಟೇಲ್ರನ್ನ ಗೌರವಿಸುತ್ತೇನೆ. ಎಫ್ಬಿಐನ ಸಿಬ್ಬಂದಿ ಅವರ ಮೇಲೆ ಗೌರವ ಹೊಂದಿದ್ದರಿಂದಲೇ, ಹಾಗಾಗಿಯೇ ಅವರ ಆಯ್ಕೆಯನ್ನು ಸಮ್ಮತಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರಮಾಣ ಸ್ವೀಕಾರಕ್ಕೂ ಮುನ್ನವೇ ಬಿಗ್ ವಾರ್ನಿಂಗ್:
ಎಫ್ಬಿಐ ನಿರ್ದೇಶಕರಾಗಿ ನೇಮಕ ಮಾಡಿ ಟ್ರಂಪ್ ಆದೇಶದ ಬೆನ್ನಲ್ಲೇ ಕಾಶ್ ಪಟೇಲ್ ತಮ್ಮ ಎಕ್ಸ್ ಖಾತೆಯಲ್ಲಿ ಎಚ್ಚರಿಕೆಯೊಂದನ್ನ ನೀಡಿದ್ದರು. ಎಫ್ಬಿಐ ಒಂದು ಪರಂಪರೆಯನ್ನು ಹೊಂದಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ನಮ್ಮ ನ್ಯಾಯ ವ್ಯವಸ್ಥೆಯು ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಂಡಿದೆ, ಈ ಬೆಳವಣಿಗೆ ಇಂದೇ ಕೊನೆಗೊಳ್ಳಬೇಕು. ಅಮೆರಿಕನ್ನರು (American people) ಹೆಮ್ಮೆ ಪಡುವಂತೆ ಎಫ್ಬಿಐ ಅನ್ನು ಮರುನಿರ್ಮಾಣ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಂಕಲ್ಪ ಮಾಡೋಣ. ಅಲ್ಲದೇ ಇದನ್ನು ನಮ್ಮ ಎಚ್ಚರಿಕೆ ಎಂದೇ ಭಾವಿಸಿ ಅಮೆರಿಕನ್ನರಿಗೆ ಹಾನಿ ಮಾಡಲು ಬಯಸುವವರು ಯಾವುದೇ ಮೂಲೆಯಲ್ಲಿದ್ದರೂ ಹುಡುಕಿ ಬೇಟೆಯಾಡುತ್ತೇವೆ ಎಂದು ಎಚ್ಚರಿಸಿದ್ದರು.

ಕಾಶ್ ಪಟೇಲ್ ಯಾರು?
ಕಾಶ್ ಪಟೇಲ್ ತಂದೆ-ತಾಯಿ ಗುಜರಾತ್ ಮೂಲದವರು. ಪಟೇಲ್ ಪೋಷಕರು ಅಮೆರಿಕದಲ್ಲಿ ನೆಲೆಸುವುದಕ್ಕಿಂತ ಮೊದಲು ಉಗಾಂಡದಲ್ಲಿದ್ದರು. ಅಲ್ಲಿಂದ ಕೆನಡಾಗೆ ಬಂದರು. ಈ ವೇಳೆ ಕಾಶ್ ಪಟೇಲ್ ತಂದೆಗೆ ಅಮೆರಿಕ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿ ಕೆಲಸ ಸಿಕ್ಕಿದ್ದರಿಂದ ಅವರು ಕುಟುಂಬ ಸಮೇತರಾಗಿ ಅಮೆರಿಕಾಗೆ ಬಂದು ನೆಲೆಸಿದರು.
ನ್ಯೂಯಾರ್ಕ್ನ ಗಾರ್ಡನ್ ಸಿಟಿಯಲ್ಲಿ 1980ರಲ್ಲಿ ಕಾಶ್ ಪಟೇಲ್ ಜನಿಸಿದರು. ಇಲ್ಲಿಯೇ ಅವರು ಕಾಲೇಜು ಶಿಕ್ಷಣ ಪಡೆದರು. ನಂತರ ರಿಚ್ಚಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ನಲ್ಲಿ ಪದವಿ ಪಡೆದರು. ಸಾರ್ವಜನಿಕ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ನಂತರ ಅವರು ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳಲ್ಲಿ ಕೆಲಸ ಮಾಡಿದರು. ಸಿದ್ದರಾಮಯ್ಯಗೆ ಕ್ಲೀನ್​ಚಿಟ್​ ಕೊಟ್ಟಿರೋದು ಅಚ್ಚರಿಯಲ್ಲ
ಕಾಶ್ ಪಟೇಲ್ ಒಬ್ಬ ಪ್ರತಿಭಾವಂತ ವಕೀಲ, ತನಿಖಾಧಿಕಾರಿ ಹಾಗೂ ಅಮೆರಿಕದ ಹೋರಾಟಗಾರ. ಭ್ರಷ್ಟಾಚಾರವನ್ನು ಬಯಲಿಗೆಳೆಯಲು, ನ್ಯಾಯ ರಕ್ಷಿಸಲು ಹಾಗೂ ಅಮೆರಿಕದ ಜನರ ಪರವಾಗಿ ತಮ್ಮ ಜೀವನ ಸವೆಸಿ ಸುದೀರ್ಘ ಹೋರಾಟ ನಡೆಸಿದ್ದಾರೆ. ಪಟೇಲ್ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ (ಎನ್ಎಸ್ಸಿ) ಭಯೋತ್ಪಾದನಾ ನಿಗ್ರಹದ ಹಿರಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಹಲವಾರ ಉಗ್ರಗಾಮಿ ಸಂಘಟನೆಗಳ ಭಯೋತ್ಪಾದಕರ ಹತ್ಯೆ ಸೇರಿದಂತೆ ಅಮೆರಿಕದ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತಂದಿದ್ದಾರೆ.

Related Posts

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.