ಪಂಚ ಗ್ಯಾರಂಟಿಗೆ ಗೌರ್ನರ್ ಶ್ಲಾಘನೆ!

ರಾಜ್ಯ ಸರ್ಕಾರವು ಪ್ರತಿ ವರ್ಷ 90,000 ಕೋಟಿ ರು.ಗೂ ಹೆಚ್ಚು ಹಣವನ್ನು ಕಲ್ಯಾಣ ಕಾರ್ಯಕ್ರಮಗಳ ಮೂಲಕ ನೇರವಾಗಿ ಜನ ರಿಗೆ ತಲುಪಿಸುತ್ತಿದೆ. ಗ್ಯಾರಂಟಿಗಳಿಂದ ಹಣ ಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥ ರಿಂದಲೇ ಶ್ಲಾಘನೆ ಪಡೆದಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರುಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ್ದಾರೆ.
ಸೋಮವಾರಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಆಡಳಿತ’ ಎಂಬುದು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶ ಎಂದು ಜನ ಕಲ್ಯಾಣವನ್ನೇ ಧೈಯವಾಗಿಟ್ಟು ಕೊಂಡು ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರವು ಸರ್ವರ ಅಭ್ಯುದಯಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.
ಉಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ, ಹಣಕಾಸು ಸ್ಥಿತಿ ಹದಗೆಡಲಿದೆ ಎಂದು ಹೇಳಲಾಗುತ್ತಿತ್ತು. ಅಂತ ಹವರ ಭವಿಷ್ಯ ಸುಳ್ಳಾಗುವಂತೆ ಅನುಷ್ಠಾನಗೊ ಳಿಸಲಾಗಿದೆ.

ರಾಜ್ಯಪಾಲರ ಭಾಷಣದಲ್ಲೇನಿದೆ?
# ವಿವಿಧ ವಿವಿಗಳು ಗ್ಯಾರಂಟಿ ಮಾದರಿಯನ್ನು ಅಧ್ಯಯನ ನಡೆಸುವಂತಾಗಿದೆ
# ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಒಯ್ಯಲು ಮುಂದಡಿ
# ಕಳೆದ 19 ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ
# ನಂಜುಂಡಪ್ಪ ವರದಿ ಜಾರಿ ಮಾಡಿ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಕ್ರಮ
# ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಪ್ರಕ್ರಿಯೆ

ಹಿಂದಿನ ಸರ್ಕಾರ ಅಕ್ರಮ ತಾರ್ಕಿಕ ಅಂತ್ಯ: ಗೌರರ್

ಹಿಂದಿನ ಸರ್ಕಾರದ ಅವಧಿಯ ಭ್ರಷ್ಟಾಚಾರ ಗಳನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು ಎಂದು ರಾಜ್ಯಪಾಲರು ಹೇಳಿದ್ದಾರೆ. ತನ್ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಹಗರಣಗಳು, ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುವುದಾಗಿ ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಸಂದೇಶ ನೀಡಿದೆ.

ತಾವೇ ತಿರಸ್ಕರಿಸಿದ್ದ ಸುಗ್ರೀವಾಜ್ಞೆಗೆ ಮೆಚ್ಚುಗೆ!

ಬಲವಂತದ ಸಾಲ ವಸೂಲಿ ವಿರುದ್ಧ ರಾಜ್ಯ ಸರ್ಕಾರ ಹೊರಡಿಸಿದ್ದ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹಲೋಸ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಆ ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!