ಕೊನೆಗೂ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾವನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರಕಳಿಸಿದ್ದು, ಫೈನಲ್‌ಗೆ ಭರ್ಜರಿ ಪ್ರವೇಶ ಪಡೆದುಕೊಂಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 49.3 ಓವರ್ ಗಳಲ್ಲಿ 264 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ನಾಯಕ ಸ್ಟೀವ್ ಸ್ಮಿತ್ 73 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾಗೆ ನೆರವಾದರು. ಟ್ರಾವಿಸ್ ಹೆಡ್ 33 ಎಸೆತಗಳಲ್ಲಿ 39 ರನ್ ಗಳಿಸಿ ಅಪಾಯಕಾರಿಯಾಗಿದ್ದಾ ವರುಣ್ ಚಕ್ರವರ್ತಿ ಅವರನ್ನು ಔಟ್ ಮಾಡಿ ಭಾರತದ ಆತಂಕ ದೂರ ಮಾಡಿದರು.

265 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಶುಭಮನ್ ಗಿಲ್ 8 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ 29 ಎಸೆತಗಳಲ್ಲಿ 28 ರನ್ ಗಳಿಸಿದರು. 43 ರನ್ ಗಳಿಸುವಷ್ಟರಲ್ಲಿ ಭಾರತ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ಮೂರನೇ ವಿಕೆಟ್‌ಗೆ ಈ ಜೋಡಿ 91 ರನ್‌ಗಳ ಜೊತೆಯಾಟ ಆಡಿದರು. ಶ್ರೇಯಸ್ ಅಯ್ಯರ್ 62 ಎಸೆತಗಳಲ್ಲಿ 45 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 30 ಎಸೆತಗಳಲ್ಲಿ 27 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್ ಸಹಿತ 28 ರನ್ ಗಳಿಸಿದರು. ಕೆಎಲ್ ರಾಹುಲ್ 34 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿದರು. ರವೀಂದ್ರ ಜಡೇಜಾ 2 ರನ್ ಗಳಿಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು