ಕರ್ನಾಟಕದ 14 ಜಿಲ್ಲೆಗಳಲ್ಲಿ ಮಾರ್ಚ್ 12ರಿಂದ 3 ದಿನಗಳ ಕಾಲ ಮಳೆ.

ಕರ್ನಾಟಕ ಮಾರ್ಚ್ 08: ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆ(Rain)ಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇದೆ.
ಹೊನ್ನಾವರ, ಕಾರವಾರ, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬೀದರ್ ಹಾಗೂ ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!