ಸಾ.ರಾ.ಮಹೇಶ್ ಕುಟುಂಬದ ಒಡೆತನದ “ಸಾರಾ ಕನ್‌ವೆನ್ನನ್ ಹಾಲ್” ಸಂಬಂಧ ತನಿಖೆಗೆ ಸರ್ಕಾರ ಆದೇಶ.

ಮೈಸೂರು : ಇಲ್ಲಿನ ದಟ್ಟಗಳ್ಳಿಯಲ್ಲಿರುವ ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಂಬದ ಒಡೆತನದ ‘ಸಾರಾ ಕನ್‌ವೆನ್ಸನ್ ಹಾಲ್’ ನಿರ್ಮಾಣದ ಕುರಿತು ತನಿಖೆಗೆ ಸರ್ಕಾರವು ಆದೇಶಿಸಿದೆ. ಈ ಬಗ್ಗೆ ನಗರಾಭಿ ವೃದ್ಧಿ ಇಲಾಖೆಯ ಅಧೀನ ಕಾರ್ಯ ದರ್ಶಿ ಕೆ. ಲತಾ, ಅಭಿವೃದ್ಧಿ ಪ್ರಾಧಿ ಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯು ಕಾಲಯದ ಆಯುಕ್ತರಿಗೆ ಮಾರ್ಚ್ 10ರಂದು ಪತ್ರ ಬರೆದಿದ್ದಾರೆ.
ದಟ್ಟಗಳ್ಳಿಯ ಸರ್ವೆ ಸಂಖ್ಯೆ 130/3ರಲ್ಲಿ 2 ಎಕರೆ 15 ಗುಂಟೆ ಜಾಗದಲ್ಲಿ ಮಾಲೀಕರು ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿದ್ದು, ಇದಕ್ಕೆ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಗಂಗರಾಜು ಎಂಬುವರು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ದೂರಿನ ಕುರಿತು ಆಯುಕ್ತರ ಮಟ್ಟದಲ್ಲಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ದೂರು: ಸಾ.ರಾ. ಮಹೇಶ್ ಪತ್ನಿ ಅನಿತಾ ಮಹೇಶ್ ಅವರು ಕಾನೂನುಬಾಹಿರ ವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿ, ದಟ್ಟಗಳ್ಳಿಯಲ್ಲಿ ಅಕ್ರಮವಾಗಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿದ್ದಾರೆ. ನಿರ್ಮಾಣದ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದು, ಮುಡಾ ಆಸ್ತಿ ಅತಿಕ್ರಮಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಮುಡಾದ ಹಿರಿಯ ಅಧಿಕಾರಿ ಗಳು ಸಹಕರಿಸಿದ್ದಾರೆ. ಒತ್ತುವರಿ ಕುರಿತು ತನಿಖೆ ನಡೆಸಬೇಕು. ಅಕ್ರಮಕ್ಕೆ ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್. ಗಂಗರಾಜು ಕಳೆದ ಫೆ.9ರಂದು ಮುಖ್ಯಮಂತ್ರಿ ಕಚೇರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!