ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.

ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ
1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು ಮಾಡಿದ ಭಾಷಣವನ್ನು ನೀವು ಓದಬೇಕು. ನಾವು ವೈರುದ್ಯದ ಸಮಾಜಕ್ಕೆ ಪ್ರವೇಶಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರ್ಥಿಕ ಸಾಮಾಜಿಕ ಸಮಾನತೆ ಇಲ್ಲ. ದುರ್ಬಲವರ್ಗದವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಿದಲ್ಲವೋ , ಅಲ್ಲಿಯವರೆಗೂ ಸಮಾನತೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ. ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ. ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ 3 ಸಾವಿರ ಡಾಲರ್ (2.62 ಲಕ್ಷ) 20.5 ಕೊಟಿ ಕುಟುಂಬಗಳ 100 ಕೋಟಿ ಜನರು ತಲಾ ಆದಾಯ 1 ಸಾವಿರ ಡಾಲರ್ (87 ಸಾವಿರ , ಅಂದರೆ ತಿಂಗಳಗೆ ಸುಮಾರು 7 ಸಾವಿರ), ಈ ವರ್ಗದವರಲ್ಲಿ ತಮ್ಮ ಅಗತ್ಯಗಳನ್ನು ಪೂರೈಸಲು ಹಣವಿರುವುದಿಲ್ಲ. 143 ಕೋಟಿ ಜನ ಮುಖ್ಯವಾಹಿನಿಗೆ ತರುವ ವ್ಯವಸ್ಥೆಯೇನು ? ಈ ದಿಸೆಯಲ್ಲಿ ಅಂತಹ ಜನರಿಗೆ ಆರ್ಥಿಕ ಸಾಮಾಜಿಕ ಸಮಾನತೆ ತರಲು ನಮ್ಮ ಸರ್ಕಾರ ಮಾಡಿರುವ ಪ್ರಮಾಣಿಕ ಪ್ರಯತ್ನ ಈ ಗ್ಯಾರಂಟಿಗಳು. United Nations ನ General Assembly ಅಧ್ಯಕ್ಷರಾದ ಕ್ಯಾಮರೂನ್ ದೇಶದ ಪಿಲೆಮಾನ್ ಯಾಂಗ್ ಅವರು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ. 05-03-2025 ರಂದು ಕೇರಳ ಸರ್ಕಾರದ ಅಧಿಕಾರಿಗಳ ತಂಡ ಹಾಗೂ ಇತರೆ ದಿನಾಂಕಗಳಲ್ಲಿ ಆಂಧ್ರಪ್ರದೇಶದ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದರು. ಆ ತಂಡಗಳಿಗೆ ಗ್ಯಾರಂಟಿಗಳ ಬಗ್ಗೆ ವಿಸ್ತೃತವಾಗಿ ವಿವರಿಸಲಾಯಿತು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ Indian Institute of Pubic Administration ಸಂಸ್ಥೆಯ ಅಧ್ಯಕ್ಷರು , ಕೇಂದ್ರಸಚಿವರಾಗಿದ್ದಾರೆ. ಉಪರಾಷ್ಟ್ರಪತಿಗಳ ಜಗದೀಪ್ ಧನಕರ್ ಅವರು ಅಧ್ಯಕ್ಷರಾಗಿ , ರಾಜ್ಯದ ಗ್ಯಾರಂಟಿಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ವಿರೋಧಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ಗ್ಯಾರಂಟಿಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಫೆಬ್ರವರಿ ಅಂತ್ಯದಲ್ಲಿ 76509 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2024-25 ರಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ಇಡಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ. ಅದರಲ್ಲಿ ಗೃಹ ಲಕ್ಷ್ಮಿ 28608 ಕೋಟಿ – ಖರ್ಚು 22611 ಕೋಟಿ , ಗೃಹಜ್ಯೋತಿ – 9657 ಕೋಟಿ –ಖರ್ಚು 8389 ಕೋಟಿ ,ಅನ್ನಭಾಗ್ಯ 8079 ಕೊಟಿ – ಖರ್ಚು 5590 ಕೋಟಿ ಶಕ್ತಿ ಯೋಜನೆಗೆ 5015 ಕೋಟಿಗಳಲ್ಲಿ -4821 ಕೋಟಿ , ಯುವನಿಧಿ 650 ಕೋಟಿ- ವೆಚ್ಚ 240 ಕೋಟಿ , ಒಟ್ಟು 52009 ರಲ್ಲಿ 41650 ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೆ 1.26 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಅನ್ನಭಾಗ್ಯದ ಫಲಾನುಭವಿಗಳು , 1.60 ಕೋಟಿ ಕುಟುಂಬದ ಗೃಹಜ್ಯೋತಿಯಿಂದ ಲಾಭಪಡೆದಿದ್ದಾರೆ

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು