ರೈತಕುಟುಂಬದಿಂದ ಬಂದಿರುವ ಅಧಿಕಾರಿಗಳನ್ನು ಕೃಷಿ ಇಲಾಖೆಗೆ ನೇಮಿಸಿ : ಜಿ.ಟಿ ದೇವೇಗೌಡ

ಕೆಂಗಲ್ ಹನುಂತಯ್ಯರವರು ಕಟ್ಟಿಸಿದ ವಿಧಾನಸೌಧದಲ್ಲಿ ಸಭಾಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿತ್ತಿದ್ದೀರಿ, ಹೊಸಬರಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಹೆಚ್ಚು ಹೆಚ್ಚು ಅವಕಾಶ ಕಲ್ಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ ಮಾತು ಪ್ರಾರಂಭಿಸಿದ ಶಾಸಕರು ತಮಿಳುನಾಡು ಆಂಧ್ರಪ್ರದೇಶದಲ್ಲಿರುವಂತೆ, ಕೃಷಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಆಯುಕ್ತರುಗಳನ್ನು ಗ್ರಾಮೀಣ ಪ್ರದೇಶಗಳ ಹಿನ್ನೆಲೆ ಉಳ್ಳ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿರುವಂತೆ ರಾಜ್ಯದಲ್ಲೂ ನೇಮಿಸುವಂತೆ ಸರ್ಕಾರಕ್ಕೆ ಶಾಸಕ ಜಿ.ಟಿ ದೇವೇಗೌಡ ಮನವಿ ಮಾಡಿದರು.

ಇಂದು ಅಧಿವೇಶನದ ಬಜೆಟ್ ಚರ್ಚೆಯಲ್ಲಿ ಪಾಲ್ಗೋಂಡು ಮಾತಾಡಿದ ಶಾಸಕರು ರೈತರೊಂದಿಗೆ ನೇರವಾಗಿ ಮಾತನಾಡಿ ಅವರ ಕಷ್ಟಕಾರ್ಪಣ್ಯಗಳಿಗೆ ಅಧಿಕಾರಿಗಳು ಸ್ಪಂದಿಸುದಲ್ಲಿರುವಂತೆ. ಆದರೆ ಕೆಲವು ಅಧಿಕಾರಿಗಳಿಗೆ ಸರಿಯಾಗಿ ಕನ್ನಡವೇ ಬರುವುದಿಲ್ಲ ಹಾಗೂ ಗ್ರಾಮೀಣ ಹಿನ್ನೆಲೆ ಇರುವುದಿಲ್ಲ ಆದ್ದರಿಂದ ರೈತರ ಕಷ್ಟಗಳಿಗೆ ಸ್ಪಂದಿಸುವ ಹಾಗೂ ಉಪಯುಕ್ತ ಸಲಹೆಗಳನ್ನು ನೀಡುವ ಅಧಿಕಾರಿಗಳನ್ನು ನೇಮಿಸಿ ರೈತರ ನೆರವಿಗೆ ನಿಲ್ಲುವಂತೆ ಮನವಿ ಮಾಡಿದರು.
ನಮ್ಮ ರಾಜ್ಯದ ರೈತರು ಕೃಷಿ ತಜ್ಞರಾಗಿದ್ದಂತಹ ಪ್ರೊಫೆಸರ್ ನಂಜುಂಡಸ್ವಾಮಿಯವರನ್ನು ನೆನಪಿಸಿಕೊಳ್ಳಬೇಕು, ಪ್ರೊ. ನಂಜುಂಡಸ್ವಾಮಿಅವರು ನಮ್ಮ ಮೈಸೂರು ಜಿಲ್ಲೆಯವರಾಗಿದ್ದು, ಅವರೊಂದಿಗೆ ನಿತಂತರ ಸಂಪರ್ಕದಲ್ಲಿದ್ದೆ. ಪ್ರೊ. ನಂಜುಂಡಸ್ವಾಮಿ ಇಲ್ಲದಿದ್ದರೆ ರೈತರಿಗೆ ಧ್ವನಿಯೇ ಇರುತ್ತಿರಲಿಲ್ಲ. ಕರ್ನಾಟಕ ರಾಜ್ಯದ ರೈತರನ್ನು ಎಚ್ಚರಿಸಿದ್ದು, ಸರ್ಕಾರ ಅಧಿಕಾರಿಗಳ ಮಟ್ಟದಲ್ಲಿ ರೈತರಿಗೆ ಒಂದು ಗೌರವವನ್ನು ತಂದು ಕೊಟ್ಟ ಪ್ರೊಫೆಸರ್ ನಂಜುಂಡಸ್ವಾಮಿಅವರಿಗೆ ಈ ಸಂದರ್ಭದಲ್ಲಿ ಈ ಸದನದ ಮೂಲಕ ರೈತರ ಪರವಾಗಿ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಇದೇ ಸಂಧರ್ಭದಲ್ಲಿ ಸ್ಮರಿಸಿಕೊಂಡರು.
ರೈತರ ಆರ್ಥಿಕತೆ ಸುಧಾರಿಸಬೇಕಾದರೆ ರೈತರಿಗೆ ನೇರವಾಗಿ ಏನೇನು ಬೇಕೋ ಅವುಗಳನ್ನು ಉದಾಹರಣೆಗೆ- ಗೊಬ್ಬರ, ಬೀಜ, ಕೀಟನಾಶಕಗಳು ಮತ್ತು ಕೃಷಿ ಪರಿಕರಗಳು ಇವೆಲ್ಲವುಗಳನ್ನು ರೈತರಿಗೆ ಸೂಕ್ತ ಸಮಯದಲ್ಲಿ ತಲುಪುವಂತೆ ಮಾಡಬೇಕು. ಅದಕ್ಕಾಗಿ ಗ್ರಾಮಗಳಲ್ಲಿ ಬಿತ್ತನೆ ಬೀಜ, ಗೊಬ್ಬರ, ಕ್ರಿಮಿನಾಶಕಗಳು ರೈತರ ಅಂಗಡಿ ಅಥವಾ ಸಹಕಾರ ಸಂಘಗಳನ್ನು ಹಳ್ಳಿಗಳಲ್ಲಿ ಪ್ರಾರಂಭ ಮಾಡುವ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಇನ್ನು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗಲು ಕ್ರಮ ಜರುಗಿಸಬೇಕು. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಕುಸಿದಾಗ ಒಂದೇ ಅಲ್ಲ. ಮಾರುಕಟ್ಟೆಯಲ್ಲಿ ಬೆಲೆ ಕುಸಿದಾಗ ತ್ವರಿತವಾಗಿ ಸರ್ಕಾರ ಮಧ್ಯಪ್ರವೇಶಿಸಬೇಕು. ಆಗ ದಲ್ಲಾಳಿಗಳು, ವ್ಯಾಪಾರಸ್ಥರು ರೈತರ ಜೀವನದ ಜೊತೆ ಚೆಲ್ಲಾಟವಾಡುವುದಿಲ್ಲ. ಸರ್ಕಾರ ಮಧ್ಯಪ್ರವೇಶಿಸಿದೆ ಎಂದರೆ, ದಲ್ಲಾಳಿಗಳಿಗೆ, ವ್ಯಾಪಾರಸ್ಥರಿಗೆ ಭಯ ಹುಟ್ಟುತ್ತದೆ, ಇದರಿಂದ ರೈತರಿಗೆ ಆತ್ಮಸ್ಥೈರ್ಯ ಸಿಕ್ಕಾಂತಾಗುತ್ತದೆ. ಉದಾಹರಣೆ ಒಂದು ವಾರದ ಹಿಂದೆ ಈರುಳ್ಳಿ ಬೆಲೆ ಕುಸಿಯಿತು, ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಗಮನ ಹರಿಸಲಿಲ್ಲ. ಇದರಿಂದ ರೈತರಲ್ಲಿ ಆತ್ಮವಿಶ್ವಾಸ ಕಡಿಮೆಯಾಗುತ್ತದೆ, ಆದ್ದರಿಂದ ರೈತರ ಮಾರುಕಟ್ಟೆ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಬೆಳೆ ಬದಲಾವಣೆ: ೨೦೦೫ – ೦೬ ರಲ್ಲಿ ೧೦ ರಿಂದ ೧೨ ಲಕ್ಷ ಎಕ್ಟರ್ ತೋಟಗಾರಿಕೆ ಬೆಳೆ ಇದ್ದು ಇದು ೨೦೨೧-೨೨ ರಲ್ಲಿ ೨೧ ಲಕ್ಷ ಹೆಕ್ಟೇರ್ ಗೆ ಏರಿಕೆಯಾಗಿದೆ ವರ್ಷದಿಂದ ವರ್ಷಕ್ಕೆ ಕೃಷಿ ಬೆಳೆಗಳ ಬದಲಾಗಿ ತೋಟಗಾರಿಕೆ ಬೆಳೆಗಳಿಗೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಅಡಕೆ ಬೆಳೆಯಲ್ಲಿ ೨೦೦೫_೦೬ ರಲ್ಲಿ ೨ ಲಕ್ಷ ಇದ್ದ ವಿಸ್ತೀರ್ಣ ಇದೀಗ ಸುಮಾರು ೭ ಲಕ್ಷ ಎಕ್ಟರ್ ಗೆ ಏರಿಕೆಯಾಗಿದ್ದು ಕಂಡುಬರುತ್ತದೆ ಇದೇ ರೀತಿ ಬಹಳಷ್ಟು ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳ ವಿಸ್ತೀರ್ಣ ಏರಿಕೆಯಾಗುತ್ತಿದ್ದು ಆಹಾರ ಧಾನ್ಯಗಳ ಉತ್ಪಾದನೆಗೆ ಬೇಕಾದ ವಿಸ್ತೀರ್ಣ ಕಡಿಮೆ ಆಗುತ್ತಿದೆ ಒಟ್ಟಾರೆ ಭೌಗೋಳಿಕ ವಿಸ್ತೀರ್ಣದಲ್ಲಿ ಶೇಕಡ ೫೬% ರಿಂದ ೬೦% ಮಾತ್ರ ಉಪಯೋಗವಾಗುತ್ತಿದ್ದು ಸುಮಾರು ೧೦-೧೨ ಲಕ್ಷ ಎಕ್ಟರ್ ಬಂಜರು ಭೂಮಿಯಾಗಿರುತ್ತದೆ ಈ ರೀತಿಯ ಏರುಪೇರು ಆಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಕೆಳಕಂಡ ಅಂಶಗಳ ಮೇಲೆ ಕೃಷಿ ಗಣಿತಿ ಆಗಬೇಕಾಗಿದೆ ಎಂದು ಸಲಹೆ ನೀಡಿದರು.

* ಬೆಳೆ ಬದಲಾವಣೆಯ ಸೂಚಕ
* ಆಹಾರ ಭದ್ರತೆಗಾಗಿ ಆಹಾರ ಬೆಳೆಗಳ ವಿಸ್ತೀರ್ಣ ಅವಶ್ಯಕತೆ .
* ಕೃಷಿ ಅರಣ್ಯೀಕರಣ
* ನಗರಗಳ ಬೆಳವಣಿಗೆಯಿಂದಾಗಿ ಕೃಷಿ ಭೂಮಿ ಪರಿವರ್ತಿತ ವಾಗಿರುವುದು
ಒಟ್ಟಾರೆಯಾಗಿ ಕೃಷಿ ಬೆಳೆಗಳ ವಿಸ್ತೀರ್ಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದು ಒಂದು ಕಡೆಯಾದರೆ ಜನಸಂಖ್ಯೆ ಏರಿಕೆ ಹಾಗೂ ಆಹಾರದ ಬೇಡಿಕೆ ಹೆಚ್ಚಾಗಿರುವುದು ಮತ್ತೊಂದು ಕಡೆ ಈ ಎಲ್ಲಾ ಅಂಶಗಳ ಬಗ್ಗೆ ಮಾಹಿತಿ ಪಡೆದು ಯೋಜನೆ ರೂಪಿಸಬೇಕಾದರೆ ಕೃಷಿಗಣತಿ ಅತಿ ಮುಖ್ಯ ಪಾತ್ರ ವಹಿಸುತ್ತದೆ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು