ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್!

ಬೆಂಗಳೂರು :- ಅ*ಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅ*ಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅ*ಚಾರಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೇ ಪ್ರಜ್ವಲ್ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿತ್ತು.
ಅ*ಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು.
ಪ್ರಕರಣದ ಹಿನ್ನೆಲೆ
ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದ್ದು, ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಕೆಲ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!