ಚಾಮರಾಜನಗರ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ.

ಮೈಸೂರು : ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ಆನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ”, ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ, “ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್ ಪೂರೈಸಲು ಯಾವುದೇ ಸರ್ಕಾರ 42 ಕೋಟಿ ರೂ.ಗಳನ್ನು ಖರ್ಚು ಮಾಡುವುದು ತೀರಾ ವಿರಳ. ಆದರೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಆದಾಯದ ಬಗ್ಗೆ ಯಾವುದೇ ವಿಳಂಬ ಮಾಡದೆ, ಮೂಲಭೂತ ಹಕ್ಕು ಎಂದು ಪರಿಗಣಿಸಿ ವಿದ್ಯುತ್ ಪೂರೈಸಲು ಒಪ್ಪಿಗೆ ನೀಡಿದರು. ಆದರೆ, ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು”, ಎಂದು ಸಭೆಯಲ್ಲಿ ತಿಳಿಸಿದರು.

https://www.youtube.com/live/mh2ZIFitrE4?si=nXoM9f7F9UerdXnn   ರೀಲ್ಸ್ ಮಾಡಿ, ದಾರವಾಹಿ ನೋಡಿದ್ರೂ RANK ಬಂದ ಯುವತಿ.  ನನ್ಗೆ ಸೈನ್ ಮಾಡೋಕೆ ಬರೋಲ್ಲ ಮಗ್ಳು RANK ಬಂದ್ಲು,

“ಜಿಲ್ಲೆಯ ಶೇ.52ರಷ್ಟು ಭೂಪ್ರದೇಶ ಅರಣ್ಯ ಪ್ರದೇಶದಿಂದ ಕೂಡಿರುವ ಕಾರಣ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅರಣ್ಯ ಇಲಾಖೆ ವತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಿದೆ. ಆದರೂ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ನೀಡಿರುವುದು ನಮಗೆ ಸಿಕ್ಕಿರುವ ದೊಡ್ಡ ಯಶಸ್ಸು. ಈಗ ಉಳಿದ ಹಾಡಿಗಳಿಗೂ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮವನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಮುಂದಿನ ಮೂರು ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಸಬೇಕಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು”, ಎಂದು ತಿಳಿಸಿದರು.

ಉಳಿದಂತೆ ಜಿಲ್ಲೆಯಲ್ಲಿ ಗೃಹಜ್ಯೋತಿ, ಗಂಗಾ ಕಲ್ಯಾಣ, ಕುಸುಮ್-ಬಿ, ಕುಸುಮ್-ಸಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸೆಸ್ಕ್ ವತಿಯಿಂದ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕೆಲಸಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ ಶಾಖೆ) ಶರಣಮ್ಮ ಎಸ್. ಜಂಗಿನ್, ಪ್ರಧಾನ ವ್ಯವಸ್ಥಾಪಕರು(ಆ ಮತ್ತು ಮಾ. ಸಂ) ಬಿ.ಆರ್. ರೂಪ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ಆಂತರಿಕ ಪರಿಶೋಧನೆ) ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರು(ಖರೀದಿ) ಎಲ್. ಲೋಕೇಶ್, ಚಾಮರಾಜನಗರ-ಕೊಡಗು ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್(ವಿ) ಸೋಮಶೇಖರ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!