ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ 24ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್ಸಿಬಿ 7 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಾಯಕ ರಜತ್ ಪಾಟೀದಾರ್ 1 ರನ್ ಗಳಿಸಿ ಔಟಾದರು. ಫಿಲ್ ಸಾಲ್ಟ್ 37, ಕೊಹ್ಲಿ 22, ಪಡಿಕ್ಕಲ್ 25 ರನ್ ಗಳಿಸಿ ತಂಡದ ಸ್ಕೋರ್ ಅನ್ನು 163ರ ಆಚೆಗೆ ಕೊಂಡೊಯ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 93 ಮತ್ತು ಟ್ರಿಸ್ಟಾನ್ ಸ್ಟಬ್ಸ್ 38, ಅಕ್ಷರ್ ಪಟೇಲ್ 15 ರನ್ ಗಳಿಸಿದರು. ಬೌಲಿಂಗ್ನಲ್ಲಿ ವಿಪ್ರಜ್ ನಿಗಮ್ 2 ವಿಕೆಟ್ ಮತ್ತು ಕುಲದೀಪ್ ಯಾದವ್ 2 ವಿಕೆಟ್ ಪಡೆದರು.