ಆನ್ ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಗ್ರಾಹಕರಿಗೆ ಪರದಾಟ.

ದೇಶಾದ್ಯಂತ ಇಂದು UPI, ಪೇಟಿಎಂ, ಫೋನ್ಪೇ, ಗೂಗಲ್ ಪೇ ಸೇವೆಯಲ್ಲಿ ತೊಂದರೆಯಾಗಿದೆ. ಆನ್ಲೈನ್ ಪೇಮೆಂಟ್ ನಂಬಿಕೊಂಡಿದ್ದವರು ಪರದಾಟ ನಡೆಸುವಂತಾಗಿದ್ದು, ಜೇಬಲ್ಲಿ ಹಣ ಇಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಇಂದು ಬೆಳಗ್ಗೆಯಿಂದಲೇ ಆನ್‌ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಆಗಿದೆ. ಸುಮಾರು 1 ಗಂಟೆಗೂ ಹೆಚ್ಚು ಕಾಲ ಈ ತೊಂದರೆ ಕಾಣಿಸಿಕೊಂಡಿದ್ದು, ಜೇಬಲ್ಲಿ ದುಡ್ಡಿಲ್ಲದ ಗ್ರಾಹಕರು ಹಣಕ್ಕಾಗಿ ಪರದಾಡುವಂತಾಗಿದೆ. ದೇಶಾದ್ಯಂತ ಆರ್ಥಿಕ ವ್ಯವಹಾರದ ಮೇಲೆ ಇದು ಪರಿಣಾಮ ಬೀರಿದೆ.

ಸಕಾಲಕ್ಕೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಕೆಲಸ ಮಾಡದ ಹಿನ್ನೆಲೆಯಲ್ಲಿ ಹಲವಾರು ಜನ ತಮಗಾದ ತೊಂದರೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. X ನಲ್ಲಿ UPI ಸರ್ವರ್ ಡೌನ್ ಅನ್ನೋ ಟ್ಯಾಗ್‌ನಲ್ಲಿ ನೆಟ್ಟಿಗರು ಪೋಸ್ಟ್ ಮಾಡುತ್ತಿದ್ದಾರೆ.
UPI ಸರ್ವರ್ ಡೌನ್ ಆದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಈ ಬಗ್ಗೆ ಸ್ಪಷ್ಟನೆ ನೀಡಿದೆ. UPI ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶಃ UPI ವಹಿವಾಟು ಕುಸಿತವಾಗಿದೆ. ನಾವು ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸುವ ಕಾರ್ಯದಲ್ಲಿ ನಿರತರಾಗಿದ್ದೇವೆ. ಈ ಅಡಚಣೆಗಾಗಿ ಗ್ರಾಹಕರಲ್ಲಿ ವಿಷಾಧಿಸುತ್ತೇವೆ ಎಂದು NPCI ತಿಳಿಸಿದೆ.

ಈಗಂತೂ ಪ್ರತಿಯೊಬ್ಬರು UPI ಮೂಲಕ ಹಣ ಪಾವತಿ ಮಾಡುವ ಅಭ್ಯಾಸ ರೂಡಿಸಿಕೊಂಡಿದ್ದಾರೆ. ಇದಕ್ಕಾಗಿ ಆನ್‌ಲೈನ್ ಪೇಮಂಟ್ ವೇದಿಕೆಗಳಾದ ಪೇಟಿಎಂ, ಫೋನ್ಪೇ, ಗೂಗಲ್ ಪೇಯನ್ನ ಬಳಸಲಾಗುತ್ತಿದೆ. ಇವುಗಳ ಅವಲಂಬಿತರಾಗಿರುವುದರಿಂದ ಸಾಕಷ್ಟು ಮಂದಿ ತಮ್ಮ ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನೇ ಬಿಟ್ಟಿದ್ದಾರೆ. ಇದೀಗ ದಿಢೀರ್ ಸಮಸ್ಯೆ ಎದುರಾಗಿರುವುದರಿಂದ ಜೇಬಲ್ಲಿ ದುಡ್ಡು ಇಲ್ಲದೇ ಪರದಾಡುವಂತಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!