ಚಾಮರಾಜ ನಗರ ಭಾಗದ ಜನರು 5000 ಎಕರೆ ಜಾಗ ವಿಚಾರಕ್ಕೆ ಆತಂಕ ಪಡಬೇಕಿಲ್ಲ- ಸಂಸದ ಯದುವೀರ್.

ಮೈಸೂರು : 5 ಸಾವಿರ ಎಕರೆ ಜಾಗ ವಿಚಾರಕ್ಕೆ ಚಾಮರಾಜ ನಗರ ಡಿಸಿಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಪತ್ರ ಬರೆದ ವಿಚಾರ ಕುರಿತು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಯದುವೀರ್, ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ.

ನಮ್ಮ ತಾಯಿ ನಮಗೆ ಸೇರಿದ ಜಾಗ ಇದೆ ಎಂದು ಪತ್ರ ಬರೆದಿದ್ದಾರೆ.. ಪತ್ರ ಬರೆದ ಕಾರಣಕ್ಕೆ ಆತಂಕ ಪಡಬೇಕಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ.  ಡಿಸಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿಸುವ ಕೆಲಸ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ. ನಮ್ಮ ಆಸ್ತಿ ಜಮೀನು ಬಗ್ಗೆ ಡಿಸಿ ಅವರಿಗೆ ತಿಳಿಸಿದ್ದೇವೆ. ಡಿಸಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತ್ಯೇಕ ಜಾತಿ ಗಣತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಸಂವಿಧಾನದಲ್ಲಿ ಸಮುದಾಯದ ಗಣತಿಗೆ ಅವಕಾಶ ಇದೆ. ಅದೇ ರೀತಿ ವೀರಶೈವ ಲಿಂಗಾಯತ ಮಹಾಸಭಾ ಜಾತಿಗಣತಿ ಮಾಡಲು ಮುಂದಾಗಿದೆ. ಸಂವಿಧಾನದಲ್ಲಿ ಅವಕಾಶ ಮಾಡಬಹುದು ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!