ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಶತಕ ಗಳಿಸಿದ ಅಭಿಷೇಕ್ ಶರ್ಮ….

ಪಂಜಾಬ್ ಹುಡುಗ ಪಂಜಾಬಿನ ವಿರುದ್ಧವೇ ಶತಕ 14 ಬೌಂಡರಿ, 10 ಸಿಕ್ಸರ್, ಒಟ್ಟು 141 ರನ್. ಐಪಿಎಲ್ 2025 ರ 27ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ ಕೇವಲ 4೦ ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇದು ಐಪಿಎಲ್ ನಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ಮೂರನೇ ಅತಿ ವೇಗದ ಶತಕವಾಗಿದೆ. ಅಭಿಷೇಕ್ ಮತ್ತು ಟ್ರಾವಿಸ್ ಹೆಡ್ ಅವರ 171 ರನ್‌ಗಳ ಜೊತೆಯಾಟವು ಈ ಸೀಸನ್‌ನ ಅತಿ ದೊಡ್ಡ ಜೊತೆಯಾಟವಾಗಿದೆ. ಅಲ್ಲದೆ ಜೊತೆ ಸೇರಿ ಕಲೆ ಹಾಕಿದ ಮೊತ್ತದಿಂದ 20045 ರನ್ಸ್ಗಳನ್ನ ಚೇಸ್ ಮಾಡಲು ದಾರಿ ಮಾಡಿ ಕೊಟ್ಟಿತು. ಶತಕ ಸಿಡಿಸಿದ ನಂತರ ಆ ಶತಕವನ್ನು ಆರೆಂಜ್ ಆರ್ಮಿಗೆ ಡೆಡಿಕೇಟ್ ಮಾಡಿದ್ದಾರೆ ಅಭಿಷೇಕ್ ಶರ್ಮ.

ಐಪಿಎಲ್ 2025 ರ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಿವೆ. ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ ಬರೋಬ್ಬರಿ 245 ರನ್ ಕಲೆಹಾಕಿತು. ಪಂಜಾಬ್ ನೀಡಿರುವ 246 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಹೈದರಾಬಾದ್ ತಂಡದ ಪರ ಯುವ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಶತಕ ಗಳಿಸಿ ಮೈದಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಆರಂಭದಿಂದಲೂ ಪಂಜಾಬ್ ಬೌಲರ್ಗಳ ಹೆಡೆಮುರಿ ಕಟ್ಟಿದ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 40 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಅಭಿಷೇಕ್ ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು. 250ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಅಬ್ಬರದ ಮುಂದೆ ಪಂಜಾಬ್ ಬೌಲರ್‌ಗಳಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಇದು ಐಪಿಎಲ್‌ನಲ್ಲಿ ಭಾರತೀಯ ಬ್ಯಾಟರ್ ಒಬ್ಬ ದಾಖಲಿಸಿದ ಅತಿ ವೇಗದ ಮೂರನೇ ಶತಕ ಎಂಬ ದಾಖಲೆಯನ್ನು ಸೃಷ್ಟಿಸಿತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!