5 ವರ್ಷ 5 ತಿಂಗಳು, 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ ಘೋಷಣೆ.

ಬೆಂಗಳೂರು : 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು 5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ಪ್ರವೇಶಕ್ಕೆ 5 ವರ್ಷ 5 ತಿಂಗಳಾಗಿದ್ದರೂ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ತಿಳಿಸಿದರು.

ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!