ಪ್ರಣಿತಾ ಸುಭಾಷ್ ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ; ಕಾರಣವೇನು?

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ.

ಹೌದು, ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ.

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ಮಕ್ಕಳಿಗೆ ಫ್ಯಾನ್ಸಿ ಹೆಸರನ್ನು ಇಡಲು ಬಯಸುತ್ತಾರೆ. ಅದರಲ್ಲೂ ಪೌರಾಣಿಕ ಪಾತ್ರಗಳ ಹೆಸರನ್ನು ಇಡಬೇಕು ಎಂದು ಯಾರೂ ಬಯಸುವುದಿಲ್ಲ. ಆದರೆ, ಪ್ರಣಿತಾ ಅವರು ಈ ವಿಚಾರದಲ್ಲಿ ಭಿನ್ನ. ತಮ್ಮ ಮಗನಿಗೆ ಅವರು ಜೈ ಕೃಷ್ಣ ಎಂದು ನಾಮಕರಣ ಮಾಡಿದ್ದಾರೆ. ಅವರು ಸಾಂಪ್ರದಾಯಿಕ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದಾರೆ.

‘ನನ್ನ ತಂದೆಯ ತಂದೆ ಹೆಸರು ಬಾಲಕೃಷ್ಣ ಅಂತ. ನಮ್ಮ ಹಾಸ್ಪಿಟಲ್ ಹೆಸರು ಶ್ರೀಕೃಷ್ಣ. ನನ್ನ ಪತಿಯ ತಂದೆಯ ಹೆಸರು ವಾಸುದೇವ ಅಂತ. ಎಲ್ಲಾ ಒಟ್ಟಿಗೆ ಸೇರಿ ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದೇವೆ’ ಎಂದಿದ್ದಾರೆ ಪ್ರಣಿತಾ ಪ್ರಣಿತಾ ಹಾಗೂ ಉದ್ಯಮಿ ನಿತಿನ್ ಜೋಡಿ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿತ್ತು.

ಈ ದಂಪತಿಗೆ 2022ರಲ್ಲಿ ಹೆಣ್ಣು ಮಗು ಜನಿಸಿತು. ಅವಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಸೆಪ್ಟೆಂಬರ್ನಲ್ಲಿ ಪ್ರಣಿತಾ ಗಂಡು ಮಗುವನ್ನು ಬರಮಾಡಿಕೊಂಡಿದ್ದು, ಈಗ ನಾಮಕರಣ ಶಾಸ್ತ್ರ ನಡೆದಿದೆ. ಪ್ರಣಿತಾ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರವೇ ಇದ್ದಾರೆ. ಸದ್ಯ ಅವರು ಎರಡನೇ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಹೊಸ ಸಿನಿಮಾ ಘೋಷಣೆ ಮಾಡೋ ಸಾಧ್ಯತೆ ಇದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!