2025ರ ದಸರಾದಲ್ಲಿ ಕಂಬಳ ಸೇರಿಸಲು: ಡಿಸಿಎಂ ಡಿಕೆ ಶಿವಕುಮಾರ್.

ಮೈಸೂರು : ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗುತ್ತದೆ ಎಂದು ತಿಳಿಸಿದರು. ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ರಾಮನಗರ ಹೆಸರು ಬದಲಾವಣೆ ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು
ರಾಮನಗರ ಹೆಸರು ಬದಲಾವಣೆ ವಿಚಾರ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಸವಾಲೆಸೆದರು. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ..? ಏನು ಅಂತ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಎಂದು ಟಾಂಗ್ ಕೊಟ್ಟರು.

ಟೌನ್ ಶಿಪ್ ಪಿತಾಮಹ ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ
ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈ ಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡಿಯೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!