ಮಲೆಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ.

ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ
ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ.  ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ತಿಳಿಸಿದರು.
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ
ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ  ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.
ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ
ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ.
ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ  ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದು ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!