ಅಲ್ಲು ಅರ್ಜುನ್-ಅಟ್ಲಿ ಸಿನಿಮಾದಲ್ಲಿ ಅನನ್ಯಾ ಪಾಂಡೆ? ಚರ್ಚೆಯಾಗುತ್ತಿದೆ ಸುದ್ದಿ…..

ನಿರ್ದೇಶಕ ಅಟ್ಲಿ ಹಾಗೂ ನಟ ಅಲ್ಲು ಅರ್ಜುನ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ತಯಾರಿ ಜೋರಾಗಿದೆ. ಪಾತ್ರವರ್ಗದ ಆಯ್ಕೆಯಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಸ್ಟೈಲ್ ಐಕಾನ್ ಅಲ್ಲು ಅರ್ಜುನ್ ಜೊತೆ ನಟಿಸುವುದೇ ಖುಷಿಯ ವಿಚಾರ. ಹೀಗಿರುವಾಗ,ಅನೇಕ ನಟಿಯರ ಹೆಸರುಗಳು ಹರಿದಾಡುತ್ತಿವೆ. ಬಾಲಿವುಡ್ ನಟಿ ಅನನ್ಯಾ ಪಾಂಡೆಯ ಹೆಸರೂ ಸಹ ಈ ಲಿಸ್ಟ್ ನಲ್ಲಿ ಕೇಳಿಬರುತ್ತಿದ್ದು, ಈ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂದು ಗಾಸಿಪ್ ಹಬ್ಬಿದೆ.

ನಟ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ‘ಪುಷ್ಪ 2’ ಹಿಟ್ ಆಗಿದ್ದರಿಂದ ಅದನ್ನು ಮೀರಿಸುವಂತಹ ಸಿನಿಮಾ ಮಾಡುವ ಸವಾಲು ಅವರ ಮುಂದಿದೆ. ಈಗ ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಅಲ್ಲದೇ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗುತ್ತಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಮೊದಲು ಮೃಣಾಲ್ ಠಾಕೂರ್ ಹೆಸರು ಕೇಳಿಬಂದಿತ್ತು. ಈಗ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಹೆಸರು ಕೂಡ ಸುದ್ದಿ ಆಗ್ತಾ ಇದೆ.
ನಟಿ ಅನನ್ಯಾ ಪಾಂಡೆ ಅವರಿಗೆ ತೆಲುಗು ಸಿನಿಮಾ ಹೊಸದೇನೂ ಅಲ್ಲ. ಈ ಮೊದಲು ಅವರು ವಿಜಯ್ ದೇವರಕೊಂಡ ಜೊತೆ ‘ಲೈಗರ್’ ಸಿನಿಮಾ ಮಾಡಿದ್ದರು. ಒಂದು ವೇಳೆ ಅಲ್ಲು ಅರ್ಜುನ್ ನಾಯಕತ್ವದ ಹೊಸ ಸಿನಿಮಾವನ್ನು ಅನನ್ಯಾ ಪಾಂಡೆ ಒಪ್ಪಿಕೊಂಡಿರುವುದು ಹೌದಾದರೆ, ಇದು ಅವರ 2ನೇ ತೆಲುಗು ಸಿನಿಮಾ ಆಗಲಿದೆ. ಆದರೆ ಅವರು ಆಯ್ಕೆ ಆಗಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲವೂ ಗಾಸಿಪ್ ಹಂತದಲ್ಲೇ ಇವೆ. ಅಷ್ಟಕ್ಕೂ ಈ ಸಿನಿಮಾಗೆ ಬೇರೆ ಬೇರೆ ನಾಯಕಿಯರ ಹೆಸರು ಕೇಳಿಬರುತ್ತಿರುವುದು ಯಾಕೆ? ಅದಕ್ಕೂ ಕಾರಣ ಇದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರಿಗೆ ಮೂರು ಪಾತ್ರಗಳು ಇರಲಿವೆ ಎಂದು ಹೇಳಲಾಗುತ್ತಿದೆ. ತಂದೆ ಮತ್ತು ಇಬ್ಬರು ಮಕ್ಕಳ ಪಾತ್ರವನ್ನು ಅಲ್ಲು ಅರ್ಜುನ್ ನಿಭಾಯಿಸಲಿದ್ದಾರೆ ಎಂದು ಗಾಸಿಪ್ ಹಬ್ಬಿದೆ. ಆ ಮೂರು ಪಾತ್ರಗಳಿಗೆ ಜೋಡಿ ಬೇಕಿರುವುದರಿಂದ ಹಲವು ನಟಿಯರ ಹೆಸರುಗಳು ಕೇಳಿಬರುತ್ತಿವೆ.

‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ವಿಎಫ್ಎಕ್ಸ್ ಕೆಲಸ ಬಹಳ ಇರಲಿದೆ. ವಿದೇಶದಲ್ಲಿ ಕೂಡ ಅದರ ತಯಾರಿ ನಡೆಯುತ್ತಿದೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಕೂಡ ಸಿಕ್ಕಿದೆ. ಈ ಎಲ್ಲಾ ವಿಚಾರಗಳಿಂದ ಕೊನೆಯದಾಗಿ ಆಯ್ಕೆಯಾಗುವ ನಾಯಕನಟಿ ಯಾರು ಎಂಬುದನ್ನು ಕಾದು ನೋಡಬೇಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!