ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗ್ತಾ ಇದೆ.

‘ಬೆಂಗಳೂರು ಎಂಬುದು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!