18 ವರ್ಷಗಳ ಕನಸನ್ನು ನನಸು ಮಾಡಲು ತಿಮ್ಮಪ್ಪನ ಮೊರೆ ಹೋದ RCB ತಂಡ.

ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ವಿಶ್ವ ವಿಖ್ಯಾತ ತಿರುಪತಿಯಲ್ಲಿರುವ ತಿಮ್ಮಪ್ಪನ ದರ್ಶನವನ್ನು ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ರಜತ್ ಹಾಗೂ ಜಿತೇಶ್ ಶರ್ಮಾ ಜೊತೆ ಆರ್ಸಿಬಿಯ ಮಹಿಳಾ ಆಟಗಾರ್ತಿ ಕನ್ನಡತಿ ಶ್ರೇಯಾಂಕ ಪಾಟೀಲ್ ಕೂಡ ದರ್ಶನ ಪಡೆದಿದ್ದಾರೆ. ಮೂವರು ಆಟಗಾರರು ಒಟ್ಟಿಗೆ ದೇವರ ದರ್ಶನದಲ್ಲಿ ಭಾಗಿಯಾಗಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸದ್ಯ 2025ರ ಐಪಿಎಲ್ ಸೀಸನ್ನಲ್ಲಿ ಅಗ್ರಸಿಂಹಾಸನದಲ್ಲಿ ಆಸನವಾಗಿದೆ. ಎಲ್ಲ ಟೀಮ್ಗಳಿಗೂ ಟಕ್ಕರ್ ಕೊಟ್ಟ ಆರ್ಸಿಬಿ ಈ ಸಲ ಕಪ್ ಗೆಲ್ಲುವ ಹಾಟ್ ಫೇವರಿಟ್ ಟೀಮ್ ಎನಿಸಿದೆ. 18 ವರ್ಷಗಳ ಕನಸನ್ನು ನನಸು ಮಾಡಲು ಆರ್ಸಿಬಿಯ ಕ್ಯಾಪ್ಟನ್ ರಜತ್ ಪಾಟಿದಾರ್ ಸೇರಿ ಮೂವರು ಆಟಗಾರರು ತಿಮ್ಮಪ್ಪನ ಮೊರೆ ಹೋಗಿದ್ದಾರೆ..

ಈ ಸಲ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ತಂಡದ ವಿರುದ್ಧದ ಭರ್ಜರಿ ಜಯ ಗಳಿಸಿದ್ದ ಆರ್ಸಿಬಿ ಇದರ ಬೆನ್ನಲ್ಲೇ 17 ವರ್ಷಗಳ ಬಳಿಕ ಚೆನ್ನೈ ಅನ್ನು ಅವರ ಪಿಚ್ನಲ್ಲೇ ಮಣಿಸಿ ವಿಜಯಭೇರಿ ಬಾರಿಸಿತ್ತು. ಈ ವಿಜಯ ಈಗಲೂ ಮುಂದುವರೆದಿದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಅಗ್ರಜನಾಗಿ ಆರ್ಸಿಬಿ ಆಸನವಾಗಿದೆ. 18 ವರ್ಷಗಳ ಟ್ರೋಫಿ ಬರವನ್ನು ಈ ವರ್ಷ ನೀಗಿಸಲು ನಾಯಕ ರಜತ್ ಪಾಟಿದಾರ್ ಉತ್ಸುಕರಾಗಿದ್ದಾರೆ. ಇದರಿಂದಲೇ ಆಂಧ್ರದಲ್ಲಿರುವ ತಿರುಪತಿಯ ಶ್ರೀವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದುಕೊಂಡಿದ್ದಾರೆ.

ಆರ್ಸಿಬಿ ಪ್ಲೇಯರ್ಸ್ ದೇವಾಲಯಕ್ಕೆ ಬರುವ ಕುರಿತು ಮೊದಲೇ ಮಾಹಿತಿ ಇದ್ದಿದ್ದರಿಂದ ಅಲ್ಲಿನ ಸಿಬ್ಬಂದಿ ವಿಶೇಷ ವ್ಯವಸ್ಥೆ ಮಾಡಿದ್ದರು. ಆದರೆ ನಾಯಕ ರಜತ್ ಪಾಟಿದಾರ್ ಅವರು ವಿಶೇಷ ವ್ಯವಸ್ಥೆ ನಿರಾಕರಿಸಿ ಎಲ್ಲರಂತೆ ಕ್ಯೂನಲ್ಲಿ ಬಂದು ಗೋವಿಂದನ ದರ್ಶನ ಪಡೆದಿದ್ದಾರೆ. ಅಷ್ಟೇ ಅಲ್ಲ, ರಂಗನಾಯಕ ಪಂಟಪದಲ್ಲಿ ಕೊಡುವ ತೀರ್ಥಪ್ರಸಾದಂ ಕೂಡ ಸಾಲಿನಲ್ಲಿ ನಿಂತು ತೆಗೆದುಕೊಂಡಿದ್ದಾರೆ. ದೇವರನ್ನು ನೋಡಿ, ದರ್ಶನ ಪಡೆದಿರುವುದು ತುಂಬಾ ಖುಷಿ ಆಗಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!