ಎರಡು ದಿನಕ್ಕೆ ಹಿಟ್ 3 ಸಿನಿಮಾ ಗಳಿಸಿದ ಹಣವೆಷ್ಟು ಗೊತ್ತಾ??….

ನ್ಯಾಚುರಲ್ ಸ್ಟಾರ್ ನಾನಿ ನಟನೆಯ ತೆಲುಗು ಸಿನಿಮಾ ‘ಹಿಟ್ 3’ ಗುರುವಾರ ಬಲು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಭರ್ಜರಿ ಪ್ರಚಾರ, ನಿರೀಕ್ಷೆಗಳ ಜೊತೆಗೆ ಈ ಸಿನಿಮಾ ಬಿಡುಗಡೆ ಆಗಿತ್ತು. ಮೊದಲ ದಿನ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹಿಟ್ ಆಯ್ತ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ತೆಲುಗಿನ ಸ್ಟಾರ್ ನಟ ನಾನಿ, ಕರ್ನಾಟಕ ಮೂಲದ ನಟಿ ಶ್ರೀನಿಧಿ ಶೆಟ್ಟಿ ನಟಿಸಿರುವ ಕ್ರೈಂ ಥ್ರಿಲ್ಲರ್ ಸಿನಿಮಾ ‘ಹಿಟ್ 3’ ಕೆಲ ದಿನದ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ನಟ ನಾನಿ ಬೆಂಗಳೂರಿಗೂ ಬಂದು ಸಿನಿಮಾದ ಪ್ರಚಾರ ಮಾಡಿ ಹೋಗಿದ್ದರು. ಸಿನಿಮಾದ ಟ್ರೈಲರ್ ಬಿಡುಗಡೆ ಆದಾಗ ಸಿನಿಮಾ ಪ್ರೇಮಿಗಳು ಬಹುವಾಗಿ ಮೆಚ್ಚಿದ್ದರು. ಸುದೀಪ್ ಪುತ್ರಿ ಸಾನ್ವಿ ಅವರು ಟ್ರೈಲರ್ಗೆ ದನಿ ಸಹ ನೀಡಿದ್ದರು. ಭಾರಿ ಪ್ರಚಾರ, ನಿರೀಕ್ಷೆಗಳೊಟ್ಟಿಗೆ ಬಿಡುಗಡೆ ಆದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಗೆದ್ದಿತಾ ಅಥವಾ ಸೋತಿತಾ? ಎಂಬ ವಿಚಾರ ಎಲ್ಲರಲ್ಲಿಯೂ ಕಾಡುವುದು ಸಹಜ.ಅದಕ್ಕಾಗಿಯೇ ಈ ಮಾಹಿತಿ ನಿಮಗಾಗಿ.
‘ಹಿಟ್ 3’ ಸಿನಿಮಾ ಬಿಡುಗಡೆ ಆದ ದಿನ ಮಿಶ್ರ ಪ್ರತಿಕ್ರಿಯೆಗಳು ಹೆಚ್ಚಾಗಿ ಕೇಳಿ ಬಂದವು. ಅದರಲ್ಲೂ ಬಹುತೇಕರು ಸಿನಿಮಾ ನಿರೀಕ್ಷೆಗೆ ತಕ್ಕಂತಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

‘ಹಿಟ್’ ಸಿನಿಮಾ ಸರಣಿಯ ಬಹಳ ವೀಕ್ ಆದ ಸಿನಿಮಾ ಇದು ಎಂಬ ಅಭಿಪ್ರಾಯವೂ ಸಹ ವ್ಯಕ್ತವಾಯ್ತು. ಆದರೆ ಹಲವರಿಗೆ ಸಿನಿಮಾದಲ್ಲಿದ್ದ ಭರ್ಜರಿ ಆಕ್ಷನ್ ಬಹಳ ಇಷ್ಟವಾಯ್ತು. ನಾನಿಯ ನಟನೆಯ ಬಗ್ಗೆಯೂ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾದವು. ಕೆಲವು ಸೆಲೆಬ್ರಿಟಿಗಳು ಸಹ ಸಿನಿಮಾ ನೋಡಿ ಮೆಚ್ಚಿಕೊಂಡರು. ಗುರುವಾರ ಬಿಡುಗಡೆ ಆದ ‘ಹಿಟ್ 3’ ಸಿನಿಮಾ ಎರಡು ದಿನಕ್ಕೆ ಬಾಕ್ಸ್ ಆಫೀಸ್ನಲ್ಲಿ 62 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಸ್ವತಃ ಚಿತ್ರತಂಡ ಹೇಳಿಕೊಂಡಿದೆ. ಆ ಮೂಲಕ ನೂರು ಕೋಟಿ ಕ್ಲಬ್ ಸೇರುವ ಸ್ಪಷ್ಟ ಸೂಚನೆಯನ್ನು ‘ಹಿಟ್ 3’ ಸಿನಿಮಾ ನೀಡಿದೆ. ‘ಹಿಟ್ 3’ ಸಿನಿಮಾ ಬಿಡುಗಡೆ ಆದ ಮೊದಲ ದಿನ ಅಂದರೆ ಗುರುವಾರ 31 ಕೋಟಿ ರೂಪಾಯಿ ಹಣವನ್ನು ಭಾರತದ ಬಾಕ್ಸ್ ಆಫೀಸ್ನಲ್ಲಿ ಗಳಿಕೆ ಮಾಡಿತ್ತು. ವಿಶ್ವ ಬಾಕ್ಸ್ ಆಫೀಸ್ ಸೇರಿ ಸುಮಾರು 38 ಕೋಟಿ ರೂಪಾಯಿ ಗಳಿಕೆಯಾಗಿತ್ತು.

ನಾನಿ ನಟನೆಯ ‘ದಸರಾ’ ಸಿನಿಮಾ ಸಹ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿತ್ತು. ಆದರೆ ಅದಾದ ಬಳಿಕ ಸಿನಿಮಾದ ಕಲೆಕ್ಷನ್ ಕುಸಿದಿತ್ತು. ಆದರೆ ‘ಹಿಟ್ 3’ ಸಿನಿಮಾ ಎರಡನೇ ದಿನವೂ ಸಹ ಭರ್ಜರಿ ಕಲೆಕ್ಷನ್ ಮಾಡಿದ್ದು, ಲಾಂಗ್ ವೀಕೆಂಡ್ ಇರುವ ಕಾರಣ ಸಿನಿಮಾದ ಕಲೆಕ್ಷನ್ ಶನಿವಾರ ಮತ್ತು ಭಾನುವಾರ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ‘ಹಿಟ್ 3’ ಸಿನಿಮಾ ಒಂದು ವಾರದ ಒಳಗಾಗಿ 100 ಕೋಟಿ ಕ್ಲಬ್ ದಾಟಲಿದೆ.

‘ಹಿಟ್ 3’ ಸಿನಿಮಾ ಅನ್ನು ಸೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಸ್ವತಃ ನಾನಿ. ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿ. ನಾನಿ ವೈಲೆಂಟ್ ವ್ಯಕ್ತಿತ್ವದ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಮೈಖಲ್ ಮೇಯರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾದ ಒಟ್ಟು ಬಜೆಟ್ 60 ಕೋಟಿ ಆಗಿದ್ದು, ಮೊದಲೆರಡು ದಿನಗಳಲ್ಲಿಯೇ 62 ಕೋಟಿ ಹಣವನ್ನು ಸಿನಿಮಾ ಬಾಚಿಕೊಂಡಿದೆ. ಹೀಗಾಗಿ ಇದು ಹಿಟ್ ಸಿನಿಮಾ ಹಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಮಾನಿಗಳು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತ ಪಡಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!