ಖ್ಯಾತ ಗಾಯಕ ಸೋನು ನಿಗಂ ವಿರುದ್ಧ, ದೂರು ದಾಖಲು.

ಖ್ಯಾತ ಗಾಯಕ ಸೋನು ನಿಗಂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರ ಬಗ್ಗೆ, ಕನ್ನಡತನದ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಈಗಾಗಲೇ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಗಾಯಕ ಸೋನು ನಿಗಂ ಹೋಲಿಸಿದ್ದು, ಇದೀಗ ಸೋನು ನಿಗಂ ವಿರುದ್ಧ ದೂರು ಸಹ ದಾಖಲಾಗಿದೆ. ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ.

ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಲಿದ್ದು, ಸೋನು ನಿಗಂ ವಿರುದ್ಧ ದೂರು ದಾಖಲಿಸಲಿದ್ದಾರೆ.

ವಿವಾದದ ಬಗ್ಗೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು, ‘ಸೋನು ನಿಗಂ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ. ಸೋನು ನಿಗಮ್ ಕನ್ನಡದಿಂದ ಬ್ಯಾನ್ ಮಾಡಬೇಕು, ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುತ್ತಾನಾ? ಸೋನು ನಿಗಂ ಈ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು, ಇಲ್ಲವಾದರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ, ಸೋನು ನಿಗಂ ಮೇಲೆ ನಿಷೇಧ ಹೇರಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ’ ಎಂದಿದ್ದಾರೆ.

 

ಇತ್ತೀಚೆಗೆ ಬೆಂಗಳೂರಿನ ಕಾಲೇಜೊಂದರಲ್ಲಿ ಸೋನು ನಿಗಂ ಲೈವ್ ಗಾಯನಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ ಆಗ ಮಾತನಾಡಿದ ಸೋನು ನಿಗಂ, ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು, ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದರು. ಸೋನು ನಿಗಂ ಅವರ ಈ ಹೇಳಿಕೆಗೆ ಕನ್ನಡಿಗರ ಒಕ್ಕೂರಲ ಆಕ್ರೋಶ ವ್ಯಕ್ತವಾಗಿದೆ. ಚಿತ್ರರಂಗದ ಕೆಲ ಪ್ರಮುಖರು ಸೋನು ನಿಗಂ ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!