ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ; ಸಿಎಂ ಸಿದ್ದರಾಮಯ್ಯ ಅಸಮಾಧಾನ.

ಬೆಂಗಳೂರು : ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.

ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದರು. ನಮಗೆ 11495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

https://www.facebook.com/reel/643984295133776    ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಟೀಕಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!