11 ವರ್ಷಗಳ ನಂತರ ಅಂಕ ಪಟ್ಟಿಯಲ್ಲಿ ಮೇಲೆ ಬಂದ ಪಂಜಾಬ್ ಕಿಂಗ್ಸ್….

ಈ ಬಾರಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿದ್ದು, ತಂಡವನ್ನು ಉತ್ತಮ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 37 ರನ್ಗಳ ಜಯ ಸಾಧಿಸಿ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

ಈ ಬಾರಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 11 ಪಂದ್ಯಗಳಲ್ಲಿ 7 ಜಯ ಹಾಗೂ ಒಂದು ಡ್ರಾನೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಒಟ್ಟು 15 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ವಿಶೇಷ ಎಂದರೆ ಪಂಜಾಬ್ ಕಿಂಗ್ಸ್ ತಂಡವು ಬರೋಬ್ಬರಿ 11 ವರ್ಷಗಳ ಬಳಿಕ 15 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಕಳೆದ ಹನ್ನೊಂದು ಸೀಸನ್ಗಳಲ್ಲಿ 14 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯಲು ಪಂಜಾಬ್ ಪಡೆಗೆ ಸಾಧ್ಯವಾಗಿಲ್ಲ. 2014 ರಲ್ಲಿ 22 ಅಂಕಗಳನ್ನು ಪಡೆದಿದ್ದೇ ಶ್ರೇಷ್ಠ ಸಾಧನೆ.

ಇದಾದ ಬಳಿಕ ಒಮ್ಮೆಯೂ ಪಂಜಾಬ್ ಕಿಂಗ್ಸ್ ತಂಡ 7 ಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದಿರಲಿಲ್ಲ ಎಂದರೆ ನಂಬಲೇಬೇಕು. ಆದರೆ ಈ ಬಾರಿಯ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಒಟ್ಟು 15 ಅಂಕಗಳನ್ನು ಪಡೆದು ಪಂಜಾಬ್ ಪಡೆ ಪ್ಲೇಆಫ್ನತ್ತ ಲಗ್ಗೆಯಿಟ್ಟಿದೆ. ಇನ್ನು 2014ರ ಬಳಿಕ ಪಂಜಾಬ್ ಕಿಂಗ್ಸ್ ಪಾಲಿಗೆ ಮರೀಚಿಕೆಯಾಗಿರುವ ಪ್ಲೇಆಫ್ ಸುತ್ತಿಗೇರಲು ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದರೆ ಶ್ರೇಯಸ್ ಅಯ್ಯರ್ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ನಲ್ಲಿ ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಪಂಜಾಬ್ ಕಿಂಗ್ಸ್ ತಂಡದ ಮುಂದಿನ ಎದುರಾಳಿಗಳೆಂದರೆ… ಡೆಲ್ಲಿ ಕ್ಯಾಪಿಟಲ್ಸ್ (ಮೇ.8), ಮುಂಬೈ ಇಂಡಿಯನ್ಸ್ (ಮೇ.11) ಹಾಗೂ ರಾಜಸ್ಥಾನ್ ರಾಯಲ್ಸ್ (ಮೇ.16). ಈ ಮೂರು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ ಒಟ್ಟು 21 ಅಂಕಗಳೊಂದಿಗೆ ಪ್ಲೇಆಫ್ಗೇರಲಿದೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!